ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲು ತರಬೇತಿಗಾಗಿ ಅರ್ಜಿ ಆಹ್ವಾನ

varthajala
0

ಬೆಂಗಳೂರು, ಡಿಸೆಂಬರ್ 17, (ಕರ್ನಾಟಕ ವಾರ್ತೆ): ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಅಡಿಯಲ್ಲಿ ರಾಜ್ಯದ ನಾಲ್ಕು ಕಂದಾಯ ವಿಭಾಗಗಳಾದ ಬೆಂಗಳೂರು, ಮಂಗಳೂರು, ಧಾರವಾಡ ಮತ್ತು ಕಲಬುರಗಿ ಕೇಂದ್ರಗಳಲ್ಲಿ ಆರು ತಿಂಗಳ ಅವಧಿಯ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆಗಳನ್ನು ನಡೆಸಲಾಗುತ್ತಿದೆ. ಈ ಸಂಬಂಧ ಅರ್ಹ ಅಭ್ಯರ್ಥಿಗಳಿಗೆ ಗ್ರಂಥಾಲಯ ಇಲಾಖೆಯ ವತಿಯಿಂದ ತರಬೇತಿಯನ್ನು ನೀಡಲು ಉದ್ದೇಶಿಸಲಾಗಿದೆ.

ತರಬೇತಿ ಪಡೆಯಲಿಚ್ಚಿಸುವ ಅಭ್ಯರ್ಥಿಗಳು ಪಿ.ಯು.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 40ರಷ್ಟು, ಪಡೆದು ಉತ್ತೀರ್ಣರಾಗಿರಬೇಕು. ಎಸ್.ಸಿ/ಎಸ್.ಟಿ ಅಭ್ಯರ್ಥಿಗಳು ಕನಿಷ್ಠ ಶೇಕಡ 35ರಷ್ಟು ಅಂಕ ಪಡೆದಿರಬೇಕು. ಈಗಾಗಲೇ ಕಾರ್ಯ ನಿರ್ವಹಿಸುತ್ತಿರುವ ಇಲಾಖೆಯ 'ಡಿ' ದರ್ಜೆಯ ಗ್ರಂಥಾಲಯ ಸಹವರ್ತಿಗಳು, ಗ್ರಾಮ ಪಂಚಾಯಿತಿ, ಗ್ರಂಥಾಲಯ ಮೇಲ್ವಿಚಾರಕರು, ಸಮುದಾಯ ಮಕ್ಕಳ ಕೇಂದ್ರ, ಅಲೆಮಾರಿ/ಕೊಳಚೆ ಹಾಗೂ ಪಟ್ಟಣ ಪಂಚಾಯಿತಿ/ಪುರಸಭೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕನಿಷ್ಠ ಶೇಕಡ 35ರಷ್ಟು ಅಂಕ ಪಡೆದ ಅಭ್ಯರ್ಥಿಗಳು ಈ ತರಬೇತಿಗೆ ಅರ್ಹರಾಗಿರುತ್ತಾರೆ.

ಹಾಲಿ ಕಾರ್ಯನಿರ್ವಹಿಸುತ್ತಿರುವ ಇಲಾಖೆಯ 'ಡಿ' ದರ್ಜೆಯ ಗ್ರಂಥಾಲಯ ಸಹವರ್ತಿಗಳು ಸಂಬಂಧಪಟ್ಟ ಉಪನಿರ್ದೇಶಕರು/ಮುಖ್ಯ ಗ್ರಂಥಾಲಯಾಧಿಕಾರಿಗಳ ಮುಖಾಂತರ, ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕರು ಸಂಬಂಧಪಟ್ಟ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಮುಖಾಂತರ ಹಾಗೂ ಇತರೆ ಸಂಸ್ಥೆಯಿಂದ ಬರುವ ಅಭ್ಯರ್ಥಿಗಳು ತಮ್ಮ ಸಂಸ್ಥೆಯ ಮುಖ್ಯಸ್ಥರ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು.
ಅರ್ಜಿಯ ಜೊತೆಗೆ ಪಿ.ಯು.ಸಿ ಅಂಕಪಟ್ಟಿ, ಜಾತಿ ಪ್ರಮಾಣಪತ್ರ, ಸೇವೆಗೆ ಸೇರಿದ ದಿನಾಂಕ, ವೇತನ ಪ್ರಮಾಣಪತ್ರ, ನಡವಳಿಕೆ ಪ್ರಮಾಣ ಪತ್ರಗಳ ನಕಲು ಪ್ರತಿಗಳನ್ನು ಲಗತ್ತಿಸಬೇಕು.

ಸಾಮಾನ್ಯ ಅಭ್ಯರ್ಥಿಗಳು ಪಿ.ಯು.ಸಿ ಅಂಕಪಟ್ಟಿ, ಜಾತಿ, ಕನ್ನಡ ಮಾಧ್ಯಮ/ಗ್ರಾಮೀಣ/ಮಹಿಳೆ/ಮಾಜಿ ಸೈನಿಕ/371 ಎ ಪ್ರಮಾಣ ಪತ್ರಗಳ ದೃಡೀಕೃತ ನಕಲು ಪ್ರತಿಗಳನ್ನು ಸಲ್ಲಿಸಬೇಕು.
ಹೆಚ್ಚಿನ ವಿವರಗಳಿಗಾಗಿ ಕಛೇರಿ ವೇಳೆಯಲ್ಲಿ ಮುಖ್ಯ ಗ್ರಂಥಾಲಯಾಧಿಕಾರಿ ಮತ್ತು ಪ್ರಾಂಶುಪಾಲರು, ರಾಜ್ಯ ಕೇಂದ್ರ ಗ್ರಂಥಾಲಯ ಹಾಗೂ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ, ಕಬ್ಬನ್ ಉದ್ಯಾನವನ, ಬೆಂಗಳೂರು-01. ದೂರವಾಣಿ ಸಂಖ್ಯೆ 080-22212128, 22293401, ಉಪ ನಿರ್ದೇಶಕರು ಮತ್ತು ಪ್ರಾಂಶುಪಾಲರು, ನಗರ ಕೇಂದ್ರ ಗ್ರಂಥಾಲಯ ಹಾಗೂ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ, ಡಿ.ಸಿ. ಕಛೇರಿ ಆವರಣ, ಧಾರವಾಡ-580001 ದೂರವಾಣಿ ಸಂಖ್ಯೆ 7829590074, ಉಪ ನಿರ್ದೇಶಕರು ಮತ್ತು ಪ್ರಾಂಶುಪಾಲರು, ನಗರ ಕೇಂದ್ರ ಗ್ರಂಥಾಲಯ ಹಾಗೂ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ, ಬಾವುಟಗುಡ್ಡೆ, ಮಂಗಳೂರು-575 003 ದೂರವಾಣಿ ಸಂಖ್ಯೆ 0824-2425873, ಉಪ ನಿರ್ದೇಶಕರು ಮತ್ತು ಪ್ರಾಂಶುಪಾಲರು, ನಗರ ಕೇಂದ್ರ ಗ್ರಂಥಾಲಯ ಹಾಗೂ ಗ್ರಂಥಾಲಯ ವಿಜ್ಞಾನ ತರಬೇತಿ ಶಾಲೆ, ಜಗತ್ ವೃತ್ತ, ಕಲಬುರ್ಗಿ-585101, ದೂರವಾಣಿ ಸಂ.08472-221543 ವಿಭಾಗಗಳನ್ನು ಸಂಪರ್ಕಿಸಿ, ಅರ್ಜಿಗಳನ್ನು ಪಡೆದು ನಿಗದಿತ ದಾಖಲೆಗಳೊಂದಿಗೆ 2025ನೇ ಜನವರಿ 10 ರ ಒಳಗಾಗಿ ಸಲ್ಲಿಸುವಂತೆ ಬೆಂಗಳೂರು ಸಾರ್ವಜನಿಕ ಗ್ರಂಥಾಲಯ ಇಲಾಖೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)