ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆ

varthajala
0

 ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ನಾಗರಭಾವಿ ವಾರ್ಡಿನ ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ದೇವಾಲಯದಲ್ಲಿ ನೂತನ ವರ್ಷದ ಕ್ಯಾಲೆಂಡರ್ ಬಿಡುಗಡೆಯನ್ನು ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ಜನಪ್ರಿಯ ನಾಯಕರಾದ ಶ್ರೀ ಕೆ ಉಮೇಶ್ ಶೆಟ್ಟಿ ಅವರು ತಾಯಿ ದುರ್ಗಾಪರಮೇಶ್ವರಿ ಅಮ್ಮನವರ ಸನ್ನಿಧಾನದಲ್ಲಿ ಬಿಡುಗಡೆ ಮಾಡಿದರು. 

ಇದೇ ಸಂದರ್ಭದಲ್ಲಿ ದೇವಸ್ಥಾನದ ಟ್ರಸ್ಟಿನ ಪದಾಧಿಕಾರಿಗಳು ಪಕ್ಷದ ಹಿರಿಯ ಮುಖಂಡರಾದ ಶ್ರೀ ನಂಜಪ್ಪಣ್ಣ ಅವರು ನಾಯಂಡಹಳ್ಳಿಯ ಶ್ರೀ ಷಡಕ್ಷರಿ ಅವರು, ಶ್ರೀ ಜಯರಾಮ್ ಅವರು, ಹಾಗೂ ಪಕ್ಷದ ಮುಖಂಡರು ಕಾರ್ಯಕರ್ತರು ಶ್ರೀ ದುರ್ಗಾಪರಮೇಶ್ವರಿ ಅಮ್ಮನವರ ಭಕ್ತಾದಿಗಳು ಉಪಸ್ಥಿತರಿದ್ದರು.




Post a Comment

0Comments

Post a Comment (0)