ಪ್ರವಾಸೋದ್ಯಮ ಇಲಾಖೆಯ ವತಿಯಿಂದ 2024-25ನೇ ಸಾಲಿನಲ್ಲಿ ಪ್ರವಾಸೋದ್ಯಮ / ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನ್ಸಿಟಿಟ್ಯೂಟ್, ಮೈಸೂರು (ಎಫ್‍ಸಿಐ) ಹಾಗೂ ಇನ್ಸಿಟಿಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್‍ಮೆಂಟ್, ಬೆಂಗಳೂರು (ಐಹೆಚ್‍ಎಂ) ಇವರ ಮೂಲಕ ವಸತಿ ಸಹಿತ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
Food and Beverage Service Steward ತರಬೇತಿಯು 4 ತಿಂಗಳಾಗಿದ್ದು, ಎಸ್‍ಎಸ್‍ಎಲ್‍ಸಿ ಉತ್ತೀರ್ಣವಾಗಿರಬೇಕು. 20 ವರ್ಷದಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿಗೆ ಪರಿಶಿಷ್ಟ ಜಾತಿಯ 100 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ 49 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
Room Attendant ತರಬೇತಿಯು 4 ತಿಂಗಳಾಗಿದ್ದು, ಐದನೇ ತರಗತಿ ಉತ್ತೀರ್ಣವಾಗಿರಬೇಕು. 20 ವರ್ಷದಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿಗೆ ಪರಿಶಿಷ್ಟ ಜಾತಿಯ 30 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ 19 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
Front office Associate ತರಬೇತಿಯು 4 ತಿಂಗಳಾಗಿದ್ದು, 12 ನೇ ತರಗತಿ ಉತ್ತೀರ್ಣವಾಗಿರಬೇಕು. 20 ವರ್ಷದಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿಗೆ ಪರಿಶಿಷ್ಟ ಜಾತಿಯ 15 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ 5 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
Multi cuisine Cook ತರಬೇತಿಯು 4 ತಿಂಗಳಾಗಿದ್ದು, 8 ನೇ ತರಗತಿ ಉತ್ತೀರ್ಣವಾಗಿರಬೇಕು. 20 ವರ್ಷದಿಂದ 45 ವರ್ಷದ ವಯೋಮಿತಿಯಲ್ಲಿರಬೇಕು. ತರಬೇತಿಗೆ ಪರಿಶಿಷ್ಟ ಜಾತಿಯ 147 ಅಭ್ಯರ್ಥಿಗಳು ಹಾಗೂ ಪರಿಶಿಷ್ಟ ಪಂಗಡದ 89 ಅಭ್ಯರ್ಥಿಗಳಿಗೆ ಮಾತ್ರ ಅವಕಾಶವಿರುತ್ತದೆ.
ಈ ನಾಲ್ಕು ವಿಭಾಗದಲ್ಲಿ ತರಬೇತಿ ಪಡೆಯಲು ಡಿಸೆಂಬರ್ 17 ರಿಂದ ಪ್ರವಾಸೋದ್ಯಮ ಇಲಾಖೆಯ ಎಲ್ಲಾ ಜಿಲ್ಲೆಗಳಲ್ಲಿನ ಜಂಟಿ ನಿರ್ದೇಶಕರು, ಉಪನಿರ್ದೇಶಕರು, ಸಹಾಯಕ ನಿರ್ದೇಶಕರು ಕಚೇರಿಯಲ್ಲಿ ಅರ್ಜಿಗಳನ್ನು ವಿತರಿಸಲಾಗುವುದು. ಅರ್ಜಿಗಳನ್ನು ಆಯಾ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಕಚೇರಿಗೆ ಡಿಸೆಂಬರ್ 28 ರೊಳಗೆ ಸಲ್ಲಿಸುವುದು. ತರಬೇತಿ ಕಾರ್ಐಕ್ರಮಗಳಿಗೆ ಸಂಬಂಧಿಸಿದಂತೆ ಆಯಾ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸುವುದು.
ಹೆಚ್ಚಿನ ಮಾಹಿತಿಗಾಗಿ ಬೆಂಗಳೂರು ವಿಭಾಗ ದೂರವಾಣಿ ಸಂಖ್ಯೆ 080-2222441, ಮೈಸೂರು ವಿಭಾಗ 0831-2470879, ಕಲಬುರಗಿ ವಿಭಾಗ 08472277848 ಗೆ ಸಂಪರ್ಕಿಸಬಹುದು ಎಂದು ಪ್ರವಾಸೋದ್ಯಮ ಇಲಾಖೆಯ ಜಂಟಿ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.