ಬೆಂಗಳೂರು; ಎಪಿಎಸ್ ಸಂಸ್ಥೆ ತನ್ನ ಸಾರ್ಥಕ 90 ವರ್ಷ ಪೂರ್ಣಗೊಳಿಸಿದ ಹಿನ್ನೆಲೆಯಲ್ಲಿಂದು ಭೇಟಿ ನೀಡಿದ ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸದಸ್ಯ ತೇಜಸ್ವಿ ಸೂರ್ಯ , ಎಪಿಎಸ್ ಸಂಸ್ಥೆಯ ನಿರಂತರ ಪ್ರಗತಿಗೆ ಸಾಧ್ಯತೆಯ ಎಲ್ಲಾ ರೀತಿಯ ಸಹಕಾರ ನೀಡಲಾಗುವುದು ಎಂದು ಹೇಳಿದ್ದಾರೆ.
ಆಡಳಿತ ಮಂಡಳಿಯನ್ನುದ್ದೇಶಿಸಿ ಮಾತನಾಡಿದ ತೇಜಸ್ವಿ ಸೂರ್ಯ, ಈ ಸಂಸ್ಥೆಯಲ್ಲಿ ಒಂದು ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು. 70 ದೃಷ್ಟಿಹೀನ ಮಕ್ಕಳ ಶಿಕ್ಷಣ ಮುಂದುವರಿಸಲು ಸಹಾಯ ಮಾಡುತ್ತಿರುವುದು ಉತ್ತಮ ಬೆಳವಣಿಗೆ. ಇತ್ತೀಚೆಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಯುಪಿ ಗವರ್ನರ್ ಆನಂದಿಬೆನ್ ಪಟೇಲ್, ಯುನಿಕಾರ್ನ್ ಪ್ರಶಾಂತ್ ಪ್ರಕಾಶ್ ಮತ್ತಿತರೆ ಗಣ್ಯರು ಭೇಟಿ ನೀಡಿ ಶಿಕ್ಷಣ ಸಂಸ್ಥೆಯ ಸಾಧನೆಯನ್ನು ಶ್ಲಾಘಿಸಿದ್ದಾರೆ ಎಂದರು.
ಶಿಕ್ಷಣ ಸಂಸ್ಥೆಯಲ್ಲಿ ಕಡಿಮೆ ಶುಲ್ಕದ ಜೊತೆಗೆ ಗುಣಮಟ್ಟದ ಶಿಕ್ಷಣ ನೀಡಲಾಗುತ್ತಿದೆ. ವಿಶ್ವವಿದ್ಯಾಲಯ ಶಿಕ್ಷಣ ಮತ್ತು ಕೈಗಾರಿಕಾ ನಿರೀಕ್ಷೆಗಳನ್ನು ಪೂರೈಸಲು ಮೌಲ್ಯವರ್ಧಿತ ಕೋರ್ಸ್‌ಗಳನ್ನು ಆರಂಭಿಸುವಂತೆ ತೇಜಸ್ವಿ ಸೂರ್ಯ ಸಲಹೆ ನೀಡಿದರು.
ಭಾರತೀಯ ರಕ್ಷಣಾ ಸಚಿವಾಲಯದ ರಕ್ಷಣಾ ಸಂಶೋಧನಾ ಮತ್ತು ಅಭಿವೃದ್ಧಿ ಸಂಸ್ಥೆ – ಡಿ.ಆರ್.ಡಿ.ಒ ಎಪಿಎಸ್ ಶಿಕ್ಷಣ ಸಂಸ್ಥೆಗೆ ಯುದ್ಧಭೂಮಿಗೆ ಅಗತ್ಯವಾಗಿರುವ ರೋಬೋಟ್ ನಿರ್ಮಿಸುವ ಯೋಜನೆಯನ್ನು ನೀಡಿದ್ದು, ಇದು ಅತ್ಯಂತ ಮಹತ್ವದ ಬೆಳವಣಿಗೆ ಎಂದು ಆಚಾರ್ಯ ಪಾಠ ಶಾಲ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಸಿಎ ಡಾ.ವಿಷ್ಣು ಭರತ್ ಆಲಂಪಲ್ಲಿ ತಿಳಿಸಿದ್ದಾರೆ.