ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ ತೆಗೆದುಕೊಳ್ಳಲು ಅವಕಾಶ

varthajala
0

ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2012ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದುಪಡಿಯನ್ವಯ ದಿನಾಂಕವನ್ನು 2025 ಡಿಸೆಂಬರ್ 31 ರವರೆಗೆ ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿದೆ.


ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು 2025 ಡಿಸೆಂಬರ್ 31 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತೀರ್ಣರಾಗಲು ಸೂಚಿಸಲಾಗಿರುತ್ತದೆ.

ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಧಿಕಾರಿ /ನೌಕರರು ಜಾಲತಾಣ https://clt.karnataka.gov.in  ಹಾಗೂ ನಿಗಮ ಮಂಡಳಿಗಳ ಅಧಿಕಾರಿ / ನೌಕರರು ಜಾಲತಾಣ https://nkclt.cit.karnataka.gov.in ತೆಗೆದುಕೊಳ್ಳಬಹುದು ಎಂದು ಬೆಂಗಳೂರು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)