ಸಮಾಜಕಲ್ಯಾಣ ಇಲಾಖೆಯ 2024-25ನೇ ಸಾಲಿನ ಆಯವ್ಯಯ ಭಾಷಣ ಕಂಡಿಕೆ-174 ರಲ್ಲಿ ಐಐಎಸ್‍ಸಿ, ಐಐಟಿ ಮತ್ತು ಎನ್‍ಐಟಿ ಸಂಸ್ಥೆಗಳ ಮೂಲಕ Artificial Intelligence and Machine Learning ಮುಂತಾದ ವೃತ್ತಿಪರ ತರಬೇತಿ ಕೋರ್ಸುಗಳಿಗೆ ಇಂಜಿನಿಯರಿಂಗ್ ಪದವೀಧರರಿಗೆ ಗರಿಷ್ಟ 2 ವಾರದ ಅವಧಿಯ ಶಿಷ್ಯವೇತನ ಸಹಿತ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ತರಬೇತಿ ಕೋರ್ಸ್‍ಗಳಲ್ಲಿ ಭಾಗವಹಿಸುವ ಪರಿಶಿಷ್ಟ ವರ್ಗದ 200 ಇಂಜಿಯರಿಂಗ್ ಪದವೀಧರರಿಗೆ ರೂ. 15,000/- ಗಳ ಶಿಷ್ಯವೇತನ ನೀಡಲಾಗುವುದು. ಅರ್ಜಿ ಸಲ್ಲಿಸಲು ಬಿ.ಇ./ಬಿ.ಟೆಕ್ ಪದವಿ ಪಡೆದಿರಬೇಕು. ಬಿ.ಇ./ಬಿ.ಟೆಕ್ ಪದವಿ ಕೋರ್ಸ್‍ಗಳಲ್ಲಿ ಕನಿಷ್ಠ ಶೇಕಡ 55 ರಷ್ಟು ಅಂಕಗಳಿಸಿರಬೇಕು. ಅರ್ಜಿ ಸಲ್ಲಿಸಲು ಏಪ್ರಿಲ್ 11 ಕೊನೆಯ ದಿನಾಂಕವಾಗಿದೆ. ಆಸಕ್ತರು ಅರ್ಜಿ ನಮೂನೆಗಳಿಗಾಗಿ ಸಂಬಂಧಪಟ್ಟ ತಾಲೂಕು ಸಮಾಜ ಕಲ್ಯಾಣ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಆನೇಕಲ್ ತಾಲೂಕಿನ ಸಮಾಜಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.