ಬೆಂಗಳೂರು ನಗರ ವಿಶ್ವವಿದ್ಯಾನಿಲಯ ಎನ್‍ಎಸ್‍ಎಸ್ ಪ್ರಶಸ್ತಿ ಪ್ರದಾನ ಸಮಾರಂಭ
ರಾಷ್ಟ್ರೀಯ ಭಾವೈಕ್ಯತೆಗೆ ಎನ್‍ಎಸ್‍ಎಸ್ ಮಹತ್ತರ ಕೊಡುಗೆ- Prof. ಲಿಂಗರಾಜ ಗಾಂಧಿ
ವಿದ್ಯಾರ್ಥಿಗಳ ವ್ಯಕ್ತಿತ್ವ ನಿರ್ಮಾಣ ಹಾಗೂ ರಾಷ್ಟ್ರೀಯ ಭಾವೈಕ್ಯತೆ ಜಾಗೃತಿ ಕಾರ್ಯದಲ್ಲಿ ಎನ್‍ಎಸ್‍ಎಸ್ ಕೊಡುಗೆ ಅತ್ಯಂತ ಮಹತ್ವಪೂರ್ಣವಾಗಿದೆ ಎಂದು ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕುಲಪತಿಗಳಾದ Prof..ಲಿಂಗರಾಜ ಗಾಂಧಿ ತಿಳಿಸಿದರು.
ಅವರು ಸೆಂಟ್ರಲ್ ಕಾಲೇಜ್ ಆವರಣದಲ್ಲಿರುವ ಜ್ಞಾನಜ್ಯೋತಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ವಿಶ್ವವಿದ್ಯಾನಿಲಯ ಮಟ್ಟದ ಎನ್‍ಎಸ್‍ಎಸ್ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ವಿವಿಧ ಪ್ರದೇಶ ಮತ್ತು ರಾಜ್ಯಗಳ ಭಾμÉ, ಸಾಹಿತ್ಯ, ಸಂಗೀತ. ಕಲೆ, ಸಂಸ್ಕøತಿಯ ಒಡನಾಟದ ಮೂಲಕ ರಾಷ್ಟ್ರೀಯ ಸೇವಾ ಯೋಜನೆ ಸಂಘಟನೆಯು ವಿದ್ಯಾರ್ಥಿ ಸಮುದಾಯದಲ್ಲಿ ರಾಷ್ಟ್ರೀಯ ಐಕ್ಯತೆಯ ಸದ್ಭಾವನೆ ಮೂಡಿಸುತ್ತಿದೆ. ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಘಟಕ ಪರಿಸರ ಸಂರಕ್ಷಣೆ, ಸ್ವಚ್ಛತಾ ಅಭಿಯಾನ, ಆರೋಗ್ಯ ಶಿಬಿರ, ಮಾದಕ ವ್ಯಸನ ಜಾಗೃತಿ, ರಕ್ತದಾನ, ನೇತ್ರದಾನ ಇತ್ಯಾದಿ ಚಟುವಟಿಕೆಗಳ ಮೂಲಕ ಅತ್ಯುತ್ತಮ ಸೇವೆ ಸಲ್ಲಿಸುತ್ತಿರುವ ಬಗ್ಗೆ ಅವರು ಅಪಾರ ಮೆಚ್ಚುಗೆ ವ್ಯಕ್ತಪಡಿಸಿದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಕುಲಸಚಿವರಾದ ಟಿ.ಜವರೇಗೌಡ ಮಾತನಾಡಿ ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಸಮಾಜ ಸೇವೆಯ ಮನೋಭಾವ ಬೆಳೆಸುವ ನಿಟ್ಟಿನಲ್ಲಿ ಎನ್‍ಎಸ್‍ಎಸ್ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಪ್ರಶಂಸಿಸಿದರು.
ಗ್ರಾಮೀಣ ಪ್ರದೇಶದ ಜನರಲ್ಲಿ ಸ್ವಚ್ಛತೆ ಮತ್ತು ನೈರ್ಮಲ್ಯದ ಅರಿವಿನ ಜೊತೆಗೆ ಅಜ್ಞಾನ, ಮೂಢನಂಬಿಕೆ, ಜಾತೀಯತೆ ಮುಂತಾದ ಸಾಮಾಜಿಕ ಪಿಡುಗುಗಳ ಬಗ್ಗೆಯೂ ಜಾಗೃತಿ ಮೂಡಿಸಬೇಕಾದ ಅಗತ್ಯವನ್ನು ಅವರು ಒತ್ತಿ ಹೇಳಿದರು.
ಎನ್‍ಎಸ್‍ಎಸ್ ಪ್ರಾದೇಶಿಕ ನಿರ್ದೇಶಕರಾದ ಕಾರ್ತಿಗೇಯನ್, ರಾಜ್ಯ ಮಟ್ಟದ ಎನ್‍ಎಸ್‍ಎಸ್ ಅಧಿಕಾರಿಗಳಾದ ಡಾ. ಪ್ರತಾಪ್ ಲಿಂಗಯ್ಯ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಶೇμÁದ್ರಿಪುರಂ ಶಿಕ್ಷಣ ಸಂಸ್ಥೆಗಳ ಸಮೂಹ, ಮೌಂಟ್ ಕಾರ್ಮೆಲ್ ಕಾಲೇಜು, ಮಹಾರಾಣಿ ಲಕ್ಷ್ಮಿ ಅಮ್ಮಣ್ಣಿ ಕಾಲೇಜು ಹಾಗೂ ಸರ್ಕಾರಿ ವಿಜ್ಞಾನ ಕಾಲೇಜುಗಳಿಗೆ ವಿಶ್ವವಿದ್ಯಾನಿಲಯ ಮಟ್ಟದ ಎನ್‍ಎಸ್‍ಎಸ್ ಪ್ರಶಸ್ತಿಗಳನ್ನು ವಿತರಿಸಲಾಯಿತು.
ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಎನ್‍ಎಸ್‍ಎಸ್ ಸಂಯೋಜಕರಾದ ಡಾ.ಗೋವಿಂದೇಗೌಡ ಸ್ವಾಗತಿಸಿದರು. ವಿಜಯಾ ಕಾಲೇಜಿನ ಡಾ. ಕೃಷ್ಣಮೂರ್ತಿ ವಂದಿಸಿದರು. ಡಾ. ರೂಪಾ ಕಾರ್ಯಕ್ರಮ ನಿರೂಪಿಸಿದರು. ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಂಯೋಜಿತ ಕಾಲೇಜುಗಳ ಎನ್‍ಎಸ್‍ಎಸ್ ಕಾರ್ಯಕ್ರಮ ಅಧಿಕಾರಿಗಳು ಮತ್ತು ಸ್ವಯಂಸೇವಕರು ಅಪಾರ ಸಂಖ್ಯೆಯಲ್ಲಿ ಭಾಗವಹಿಸಿದ್ದರು.