ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ, ಸಾರ್ವಜನಿಕರ ತೆರಿಗೆ ಹಣ ಸದ್ಬಳಕೆ ,ಯೋಜನೆ ರೂಪಿಸಿ ಅನುಷ್ಠಾನ-ಶಾಸಕ ಎಸ್.ಸುರೇಶ್ ಕುಮಾರ್
ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಪ್ರಕಾಶನಗರ, ಶ್ರೀ ರಾಮಮಂದಿರ ವಾರ್ಡ್ ಗಳಲ್ಲಿ ಕಾಂಕ್ರೀಟ್ ರಸ್ತೆ ನಿರ್ಮಾಣ ಕಾಮಗಾರಿಗಳಗೆ ಶಾಸಕರಾದ ಎಸ್.ಸುರೇಶ್ ಕುಮಾರ್ ರವರು ಗುದ್ದಲಿಪೂಜೆ ಮಾಡಿ ಚಾಲನೆ ನೀಡಿದರು.
ಕಾರ್ಯಪಾಲಕ ಅಭಿಯಂತರ ಗಂಗಾಧರ್, ನಿಕಟಪೂರ್ವ ಬಿಬಿಎಂಪಿ ಸದಸ್ಯೆ ಶ್ರೀಮತಿ ದೀಪಾ ನಾಗೇಶ್, ಬಿಜೆಪಿ ಮುಖಂಡರುಗಳಾದ ಯಶಸ್ ನಾಯಕ್, ಗಿರೀಶ್ ಗೌಡ, ಕಾಮಧೇನು ಸುರೇಶ್ , ಪ್ರವೀಣ್ ರವರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಎಸ್.ಸುರೇಶ್ ಕುಮಾರ್ ರವರು ಮಾತನಾಡಿ ರಾಜಾಜಿನಗರ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಅತ್ಯಂತ ಕಿರುದಾದ ರಸ್ತೆಗಳಿಗೆ ಕಾಂಕ್ರೀಟ್ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಇದರಿಂದ ಆರ್ಥಿಕ ಉಳಿತಾಯ ಮತ್ತು ರಸ್ತೆ 20ವರ್ಷದವರಗೆ ಬಾಳಿಕೆ ಬರುತ್ತದೆ.
ಜನರೊಂದಿಗೆ ಜನಸೇವಕ ಜನಸ್ಪಂದನಾ ಕಾರ್ಯಕ್ರಮದಲ್ಲಿ ಸಾರ್ವಜನಿಕರು ರಸ್ತೆ ಆಗಬೇಕು ಎಂದು ಮನವಿ ಸಲ್ಲಿಸಿದ್ದರು, ಇದರ ಅನುಗುಣವಾಗಿ ಇಂದು ಪ್ರಕಾಶ…