ಬೆಂಗಳೂರು : ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಾಧೀಶರಾದ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್. ಕೆ. ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರದ ಪ್ರಯುಕ್ತ ಬೆಳಗ್ಗೆ ಗುರುರಾಯರ ಬೃಂದಾವನಕ್ಕೆ ಅಷ್ಟೋತ್ತರ ಸಹಿತ ಪಂಚಾಮೃತ ಅಭಿಷೇಕ, ವಿಶೇಷ ಅಲಂಕಾರ, ಕನಕಾಭಿಷೇಕ, ಅನ್ನದಾನ ಸೇವೆಗಳು ಜರುಗಿದವು.
ಸಂಜೆಯ ಕಾರ್ಯಕ್ರಮದಲ್ಲಿ ರಥೋತ್ಸವ ಪಲ್ಲಕ್ಕಿ ಉತ್ಸವ ಗಜವಾಹನೋತ್ಸವ ತೊಟ್ಟಿಲು ಸೇವೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಶ್ರೀಮತಿ ವೈಷ್ಣವಿ ಕೊಪ್ಪ ಮತ್ತು ಸಂಗಡಿಗರಿಂದ ಸಂಗೀತ ಸೇವೆ ಕಾರ್ಯಕ್ರಮಗಳು ಏರ್ಪಡಿಸಿತ್ತು ಎಂದು ಶ್ರೀಮಠದ ಪುರೋಹಿತರಾದ ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.