ಶಿವೈಕ್ಯ ಶ್ರೀ ಶಿವಕುಮಾರ ಶ್ರೀಗಳ 118ನೇ ಜನ್ಮದಿನೋತ್ಸವ
Author -
personvarthajala
April 01, 2025
ತುಮಕೂರು: ಸಿದ್ದಗಂಗಾ ಮಠದ ಶಿವೈಕ್ಯ ಶಿವಕುಮಾರ ಸ್ವಾಮೀಜಿಗಳ 118ನೇ ಜನ್ಮದಿನೋತ್ಸವ ಸಲುವಾಗಿ ಇಂದು ಮುಂಜಾನೆಯಿಂದಲೇ ಶ್ರೀಗಳ ಗದ್ದುಗೆಯಲ್ಲಿ ಪೂಜಾ ಕೈಂಕರ್ಯಗಳು ನಡೆಯುತ್ತಿವೆ. ಸಿದ್ದಗಂಗಾ ಮಠಾಧ್ಯಕ್ಷ ಸಿದ್ದಲಿಂಗ ಸ್ವಾಮೀಜಿಗಳ ನೇತೃತ್ವದಲ್ಲಿ ಮಂತ್ರ ಘೋಷಗಳೊಂದಿಗೆ ಪೂಜೆ ಕಾರ್ಯಗಳು ನೆರೆವೇರುತ್ತಿವೆ.
ಪೂಜೆಯಲ್ಲಿ ವಿವಿಧ ಮಠಾಧಿಪತಿಗಳು ಭಾಗಿಯಾಗಿದ್ದಾರೆ. ಸಭಾ ಕಾರ್ಯಕ್ರಮದಲ್ಲಿ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್. ಡಿಸಿಎಂ ಡಿ.ಕೆ.ಶಿವಕುಮಾರ್, ಗೃಹ ಸಚಿವ ಜಿ.ಪರಮೇಶ್ವರ್, ಕೇಂದ್ರ ಸಚಿವ ವಿ.ಸೋಮಣ್ಣ, ಸುತ್ತೂರು ಶ್ರೀಗಳು ಸೇರಿ ಹಲವರು ಉಪಸ್ಥಿತರಿರಲಿದ್ದಾರೆ
Share to other apps