ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಯಾದ ನೂತನ (karnataka bhavana) ಕರ್ನಾಟಕ ಭವನ (ಕಾವೇರಿ) ನಿರ್ಮಾಣ ಕಾರ್ಯ ಪೂರ್ಣಗೊಂಡಿದ್ದು, ಇದರ ಉದ್ಘಾಟನಾ ಸಮಾರಂಭವು ಬುಧವಾರ ಸಂಜೆ 6:30ಕ್ಕೆ ನಡೆಯಲಿದೆ. ಸಿಎಂ ಸಿದ್ದರಾಮಯ್ಯ ಅವರು ಈ ಭವ್ಯ ಕಟ್ಟಡ ಉದ್ಘಾಟಿಸಲಿದ್ದಾರೆ . (Delhi)
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಘನ ಉಪಸ್ಥಿತಿ ವಹಿಸಲಿದ್ದು, ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಿಸಿಎಂ ಡಿ.ಕೆ.ಶಿವಕುಮಾರ್, ಗೌರವ ಆಹ್ವಾನಿತರಾಗಿ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣ ಸ್ವಾಮಿ ಅವರನ್ನ ಆಹ್ವಾನಿಸಲಾಗಿದೆ.
ದೆಹಲಿಯ ಪ್ರತಿಷ್ಠಿತ ಪ್ರದೇಶವಾದ ಚಾಣಕ್ಯಪುರಿಯಲ್ಲಿ ನಿರ್ಮಾಣವಾಗಿರುವ ಈ ಕಟ್ಟಡವು 3,532 ಚದರ ಮೀಟರ್ ವಿಸ್ತೀರ್ಣವನ್ನು ಹೊಂದಿದೆ. ಒಟ್ಟು 12,212 ಚದರ ಮೀಟರ್ (1,31,450 ಚದರ ಅಡಿ) ನಿರ್ಮಾಣ ಪ್ರದೇಶವನ್ನು ಒಳಗೊಂಡಿರುವ ಈ ಭವನವು 2ಬಿ+ಜಿ+6ಯು ರಚನೆಯಲ್ಲಿ 9 ಅಂತಸ್ತುಗಳನ್ನು ಹೊಂದಿದೆ.
ಕಟ್ಟಡದ ಒಟ್ಟು 10 ಮಹಡಿಗಳಲ್ಲಿ ವಿವಿಧ ಸೌಲಭ್ಯಗಳನ್ನು ಒದಗಿಸಲಾಗಿದೆ:
ಈ ಕಟ್ಟಡದಲ್ಲಿ 52 ಕೊಠಡಿಗಳಿದ್ದು, ಅದರಲ್ಲಿ 2 ವಿವಿಐಪಿ ಸೂಟ್ಗಳು, 32 ಸೂಟ್ ರೂಂಗಳು ಮತ್ತು 18 ಸಿಂಗಲ್ ರೂಂಗಳು ಸೇರಿವೆ. ಇದರ ಜೊತೆಗೆ 86 ಶೌಚಾಲಯಗಳು ಮತ್ತು ಬೇಸ್ಮೆಂಟ್ನಲ್ಲಿ 10 ಕಾರ್ ಪಾರ್ಕಿಂಗ್ ಸೌಲಭ್ಯವನ್ನು ಒಳಗೊಂಡಿದೆ. ಯೋಜನೆಯು 2018ರಲ್ಲಿ ಆರಂಭವಾಗಿದ್ದು, ಇದಕ್ಕಾಗಿ 81.00 ಕೋಟಿ ರೂ. ಮೀಸಲಿಟ್ಟಿತ್ತು. ಆದರೆ ಕಾಮಗಾರಿ ಅಂತ್ಯದ ವೇಳೆಗೆ ಯೋಜನೆಯ ವೆಚ್ಚ 138 ಕೋಟಿ ರೂ. ತಲುಪಿದೆ.
ಕೆಳಗಿನ ಬೇಸ್ಮೆಂಟ್ (2335 ಚ.ಮೀ.): ಲಿಫ್ಟ್ ಲಾಬಿ, ಸ್ಟೇರ್ಕೇಸ್, ಡ್ರೈವರ್ ಲಾಂಡ್ರಿ, ಸೆಕ್ಯುರಿಟಿ ರೂಂ, ಬಿಎಂಎಸ್ ರೂಂ, 50 ಕಾರ್ ಪಾರ್ಕಿಂಗ್ ಸ್ಥಳವಿದೆ.
ಕರ್ನಾಟಕ ಭವನ (ಕಾವೇರಿ) ದೆಹಲಿಗೆ ಭೇಟಿ ನೀಡುವ ಕರ್ನಾಟಕದ ಸರ್ಕಾರಿ ಅಧಿಕಾರಿಗಳು, ಗಣ್ಯರು ಮತ್ತು ಸಾರ್ವಜನಿಕರಿಗೆ ಆರಾಮದಾಯಕ ಆತಿಥ್ಯ ಸೌಲಭ್ಯವನ್ನು ಒದಗಿಸುವ ಉದ್ದೇಶವನ್ನು ಹೊಂದಿದೆ. ಈ ಭವನವು ಕರ್ನಾಟಕದ ಸಂಸ್ಕೃತಿ, ಪರಂಪರೆ ಮತ್ತು ಆತಿಥ್ಯವನ್ನು ಪ್ರತಿಬಿಂಬಿಸುವಂತೆ ವಿನ್ಯಾಸಗೊಳಿಸಲಾಗಿದೆ. ಇದರ ಜೊತೆಗೆ, ದೆಹಲಿಯಲ್ಲಿ ಕರ್ನಾಟಕ ಸರ್ಕಾರದ ಕಾರ್ಯಕ್ರಮಗಳು, ಸಭೆ-ಸಮಾರಂಭಗಳು ಮತ್ತು ಸಾಂಸ್ಕೃತಿಕ ಚಟುವಟಿಕೆಗಳಿಗೆ ಇದು ಪ್ರಮುಖ ಕೇಂದ್ರವಾಗಿ ಕಾರ್ಯನಿರ್ವಹಿಸಲಿದೆ.