ಒಂದು ವಾರ ಭಾರೀ ಮಳೆ: 19 ಜಿಲ್ಲೆಗಳಿಗೆ ಅಲರ್ಟ್ ಘೋಷಣೆ

varthajala
0

ಬೆಂಗಳೂರು :ರಾಜ್ಯದಲ್ಲಿ ಏಳು ದಿನಗಳಿಂದ ಮಳೆ ವರುಣನ ಆರ್ಭಟ ಮುಂದುವರಿದಿದ್ದು, ಮುಂದಿನ ಒಂದು ವಾರ ರಾಜ್ಯದ ಹಲವೆಡೆ ಮಳೆಯಾಗಲಿರುವ ಲಕ್ಷಣಗಳು ಕಾಣಸಿಗುತ್ತಿವೆ ಎಂದು ಭಾರತೀಯ ಹವಾಮಾನ ಇಲಾಖೆ (Iಒಆ) ಮುನ್ಸೂಚನೆ ನೀಡಿದೆ. ಕರಾವಳಿ, ಮಲೆನಾಡು ಹಾಗೂ ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಏಪ್ರಿಲ್ 12ರವರೆಗೆ ಗುಡುಗು ಸಹಿತ ಮಳೆ ಸುರಿಯಲಿದೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣವಿದ್ದರೂ ಒಣಹವೆ ಮುಂದುವರಿಯಲಿದೆ ಎಂದು ತಿಳಿದುಬಂದಿದೆ.



ಈಗಾಗಲೇ ಸೋಮವಾರ ಬಂಡೀಪುರ, ಎಂಎA ಹಿಲ್ಸ್ ಮತ್ತು ಶಿರಸಿಯಲ್ಲಿ ಮಳೆ ಸುರಿದಿದ್ದು, ಇಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮತ್ತು ಚಾಮರಾಜನಗರದಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಗಳು ಹೆಚ್ಚಾಗಿವೆ. ಇದೇ ವೇಳೆ ಕೊಡಗು, ಮೈಸೂರು, ಮತ್ತು ಚಾಮರಾಜನಗರಕ್ಕೆ ಮುಂದಿನ ಕೆಲ ಗಂಟೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯ ನೌಕಾಸ್ಟ್ ಅಲರ್ಟ್ ಸೂಚಿಸಿದೆ.

ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಬಾಗಲಕೋಟೆ, ವಿಜಯಪುರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಚಾಮರಾಜನಗರ, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ದಾವಣಗೆರೆ, ಮತ್ತು ತುಮಕೂರಿನಲ್ಲಿ ವರುಣನ ಆರ್ಭಟ ಮುಂದುವರೆಯಲಿದೆ.

ಬೆ0ಗಳೂರಿನಲ್ಲಿ 2 ದಿನ ಹಗುರ ಮಳೆಯೊಂದಿಗೆ ಮೋಡಕವಿದ ವಾತಾವರಣ ಇರಲಿದ್ದು, ಗರಿಷ್ಠ 33 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದೆ. ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಗರಿಷ್ಠ ಉಷ್ಣಾಂಶ ದಾಖಲಾಗಿದ್ದು, ಕಾರವಾರದಲ್ಲಿ 36.4 ಡಿಗ್ರಿ ಸೆಲ್ಸಿಯಸ್ ತಾಪಮಾನ ಸಾಮಾನ್ಯಕ್ಕಿಂತ ಹೆಚ್ಚಾಗಿದೆ. ಹೊನ್ನಾವರದಲ್ಲಿ 33.0 ಡಿಗ್ರಿ ಮತ್ತು ಪಣಂಬೂರಿನಲ್ಲಿ 34.0 ಡಿಗ್ರಿ ಗರಿಷ್ಠ ತಾಪಮಾನ ದಾಖಲಾಗಿದೆ.

ಕರ್ನಾಟಕದಲ್ಲಿ ಏಪ್ರಿಲ್ 12ರವರೆಗೆ ಮಳೆ ಮುಂದುವರಿಯಲಿದ್ದು, ಕರಾವಳಿ ಮತ್ತು ಮಲೆನಾಡಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಗಳು ಇದೆ.

Post a Comment

0Comments

Post a Comment (0)