ಪಿಯು ಫಲಿತಾಂಶ: ಲಾರಿ ಡ್ರೈವರ್​​ ಮಗಳು ರಾಜ್ಯಕ್ಕೆ ಪ್ರಥಮ! ಎಲ್ಲ ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಟಾಪರ್​; - 2ND PUC RESULT 2025

varthajala
0

 ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು, ಕಲಾ, ವಾಣಿಜ್ಯ, ವಿಜ್ಞಾನ ಮೂರೂ ವಿಭಾಗಗಳಲ್ಲೂ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಕಲಾ ವಿಭಾಗದಲ್ಲಿ ವಿಜಯನಗರ ಜಿಲ್ಲೆಯ ಕೊಟ್ಟೂರು ಪಟ್ಟಣದ ಇಂದು ಐಎನ್​ಡಿಪಿ ಪಿಯು ಕಾಲೇಜಿನ ವಿದ್ಯಾರ್ಥಿನಿ ಎಲ್.ಆರ್.ಸಂಜನಾ ಬಾಯಿ ಟಾಪರ್ 597 ಅಂಕ ಗಳಿಸುವ ಮೂಲಕ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೊಡಿಂಬೈಲ್​ನ ಕೆನೆರಾ ಪಿಯು ಕಾಲೇಜಿನಿ ವಿದ್ಯಾರ್ಥಿನಿ ದೀಪಾಶ್ರೀ ಎಸ್. 599 ಅಂಕ ಗಳಿಸುವ ಮೂಲಕ ಟಾಪರ್​ ಆಗಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಮಂಗಳೂರಿನ ಕೊಡಿಬೈಲ್​ನ ಎಕ್ಸ್​ಪರ್ಟ್ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಎಸ್. 597 ಅಂಕ ಗಳಿಸುವ ಮೂಲಕ ಮೊದಲ ಸ್ಥಾನ ಗಳಿಸಿದ್ದಾರೆ.

ಉಡುಪಿ ಫಸ್ಟ್​- ಯಾದಗಿರಿ ಲಾಸ್ಟ್​: ರಾಜ್ಯದಲ್ಲಿ ಉಡುಪಿ ಜಿಲ್ಲೆ 93.90 ಫಲಿತಾಂಶದ ಮೂಲಕ ಪ್ರಥಮ ಸ್ಥಾನದಲ್ಲಿದ್ದು, ದಕ್ಷಿಣ ಕನ್ನಡ ಹಾಗೂ ಬೆಂಗಳೂರು ದಕ್ಷಿಣ ಜಿಲ್ಲೆಗಳು ಕ್ರಮವಾಗಿ ದ್ವಿತೀಯ ಹಾಗೂ ತೃತೀಯ ಸ್ಥಾನ ಗಳಿಸಿದೆ.

ಯಾದಗಿರಿ ಜಿಲ್ಲೆಯ ಕೊನೆಯ ಸ್ಥಾನದಲ್ಲಿದ್ದು, ಶೇ.48.45 ಫಲಿತಾಂಶ ತನ್ನದಾಗಿಸಿಕೊಂಡಿದೆ.

ರಾಜ್ಯದಲ್ಲಿ ಒಟ್ಟು 7,13,862 ವಿದ್ಯಾರ್ಥಿಗಳು ಪರೀಕ್ಷೆಗೆ ಹೆಸರು ನೋಂದಾಯಿಸಿಕೊಂಡಿದ್ದು, ಶೇಕಡಾ 73.45ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ಕಲಾ ವಿಭಾಗದಲ್ಲಿ ಶೇ.53, ವಾಣಿಜ್ಯ ವಿಭಾಗದಲ್ಲಿ ಶೇ.76.07, ಹಾಗೂ ವಿಜ಼್ಞಾನ ವಿಭಾಗದಲ್ಲಿ ಶೇ.82ರಷ್ಟು ವಿದ್ಯಾರ್ಥಿಗಳು ಪಾಸ್​ ಆಗಿದ್ದಾರೆ.


Post a Comment

0Comments

Post a Comment (0)