ಪಾಟಿದಾರ್‌ ಕ್ಯಾಪ್ಟನ್ಸಿ ಬಗ್ಗೆ ಅಸಮಾಧಾನ – ಡಿಕೆಗೆ ಕೊಹ್ಲಿ ದೂರು?

varthajala
0

 ಬೆಂಗಳೂರು: 18ನೇ ಆವೃತ್ತಿಯ ಐಪಿಎಲ್‌ನಲ್ಲಿ ಮೂರು ಐತಿಹಾಸಿಕ ಗೆಲುವು ಕಂಡಿರುವ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು  ತಂಡ ತವರಿನಲ್ಲಿ ನಡೆದ ಎರಡೂ ಪಂದ್ಯಗಳಲ್ಲೂ ಹೀನಾಯ ಸೋಲು ಕಂಡಿದೆ. ಆದ್ರೆ ಗುರುವಾರ ಡೆಲ್ಲಿ ಕ್ಯಾಪಿಟಲ್ಸ್‌  ವಿರುದ್ಧ ನಡೆದ ಪಂದ್ಯದಲ್ಲಿ ಆರ್‌ಸಿಬಿ ಸೋತಿದೆ ಎನ್ನುವುದಕ್ಕಿಂತ ಹೆಚ್ಚಾಗಿ ತಂಡದಲ್ಲೇ ಆಂತರಿಕ ಕಲಹ ಉಂಟಾಗಿದೆ ಅನ್ನೋ ವದಂತಿ ಹೆಚ್ಚು ಸದ್ದು ಮಾಡುತ್ತಿದೆ.

ಹೌದು. ಚೇಸಿಂಗ್‌ ವೇಳೆ ಸ್ಫೋಟಕ ಆರಂಭ ಪಡೆಯುವ ನಿರೀಕ್ಷೆಯಲ್ಲಿದ್ದ ಡೆಲ್ಲಿ ಕ್ಯಾಪಿಟಲ್ಸ್‌ ತಂಡಕ್ಕೆ ಆರ್‌ಸಿಬಿ ಆರಂಭದಲ್ಲಿ ಪ್ರಬಲ ಪೈಪೋಟಿ ನೀಡಿತ್ತು. 4.3 ಓವರ್‌ಗಳಲ್ಲಿ 30 ರನ್‌ಗಳಿಗೆ 3 ವಿಕೆಟ್‌, 58 ರನ್‌ಗಳಿಗೆ 4 ಪ್ರಮುಖ ವಿಕೆಟ್‌ಗಳನ್ನು ಆರ್‌ಸಿಬಿ ಪಡೆದುಕೊಂಡಿತ್ತು. ಆ ಬಳಿಕ ಕ್ರೀಸ್‌ನಲ್ಲಿ ಭದ್ರವಾಗಿ ನೆಲೆಯೂರಿದ ಕೆ.ಎಲ್‌ ರಾಹುಲ್‌  ಮತ್ತು ಟ್ರಿಸ್ಟನ್‌ ಸ್ಟಬ್ಸ್‌ ಮುರಿಯದ 5ನೇ ವಿಕೆಟ್‌ಗೆ 55 ಎಸೆತಗಳಲ್ಲಿ ಸ್ಫೋಟಕ 111 ರನ್‌ಗಳ ಜೊತೆಯಾಟ ನೀಡುವ ಮೂಲಕ ಡೆಲ್ಲಿ ತಂಡವನ್ನು ಗೆಲುವಿನ ದಡ ಸೇರಿಸಿದರು.

ಪಂದ್ಯ ಕೊನೆಯ ಹಂತದಲ್ಲಿರುವಾಗ ಆರ್‌ಸಿಬಿ ಸ್ಟಾರ್ ವಿರಾಟ್ ಕೊಹ್ಲಿ
ಬ್ಯಾಟಿಂಗ್‌ ಕೋಚ್‌ ದಿನೇಶ್ ಕಾರ್ತಿಕ್  ಅವರೊಂದಿಗೆ ಕೋಪ ಮತ್ತು ಬೇಸರಿಂದ ಗಾಢ ಚರ್ಚೆಯಲ್ಲಿ ತೊಡಗಿದ್ರು, ಫೀಲ್ಡ್‌ ಸೆಟ್‌ನತ್ತ ಕೈತೋರಿಸುತ್ತಾ ಮಾತನಾಡುತ್ತಿದ್ದರು. ಈ ವಿಡಿಯೋ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಭಾರೀ ಚರ್ಚೆಗೆ ಕಾರಣವಾಗಿದೆ.

Post a Comment

0Comments

Post a Comment (0)