ಬೆಂಗಳೂರು: ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿದರು ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಅಪಮಾನ ಮಾಡಿರುವ ಖಂಡನೆ ವ್ಯಕ್ತಪಡಿಸಿ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.
ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎಸ್.ರಘುನಾಥ್ ರವರು ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ, ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ.
ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ. ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ ಮತ್ತು ಸಿ.ಇ.ಟಿ.ಪ್ರಾಧಿಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಸಮಾಧಾನಕರ ಸಂಗತಿ.
ಜನಿವಾರ ಕಿತ್ತು ಹಾಕಿರುವುದರಿಂದ ಬ್ರಾಹ್ಮಣ ಸಮುದಾಯವು ರಾಜ್ಯಾದ್ಯಂತ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಎಲ್ಲ ಕಡೆಗಳಲ್ಲಿ ಪ್ರತಿಭಟನೆಯಾಗುತ್ತಿದೆ. ವಿಪ್ರ ಸಮುದಾಯದಕ್ಕೆ ಆಗಿರುವ ನೋವು, ಸಂಕಷ್ಟಗಳು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಮಹಾಸಭಾ ದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು.
ಸಿ.ಇ.ಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬ್ರಾಹ್ಮಣ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯ ಮಹಾಸಭಾದಿಂದ ನೀಡಲಾಗುವುದು, ನಮ್ಮ ಸಂಪ್ರಾದಯ, ಸಂಸ್ಕೃತಿ ಎತ್ತಿಹಿಡಿದಿದ್ದಾನೆ ಎಂದು ಹೇಳಿದರು.
ಆರ್.ಲಕ್ಷ್ಮಿಕಾಂತ್ ಯಾರು ಏನು ಬೇಕಾದರು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಮಾಡಬಹುದು ಎಂದು ತಿಳಿದಿದ್ದಾರೆ , ಜನಿವಾರ ವಿವಾದ ಇಡಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ. ಪರೀಕ್ಷೆ ಬರೆಯಲು ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ, ಅದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಈ ಪರೀಕ್ಷೆ ಮಾಡಬೇಕು ಎಂದರೆ ಪೂರ್ವನಿಯೋಜಿತ ಸಂಚು ಎಂದು ಕಾಣುತ್ತದೆ.
ಸಂವಿಧಾನದಲ್ಲಿ ಬ್ರಾಹ್ಮಣರಿಗೆ ಬದುಕಲು ಅವಕಾಶ ನೀಡಿದೆ. ಬ್ರಾಹ್ಮಣರಿಗೆ ಅಪಮಾನ, ತೇಜೋವಧೆ ಮಾಡಿದರೆ ಉಗ್ರ ಪ್ರತಿಭಟನೆ ಮಾಡಲಾಗುವುದು. ಸರ್ಕಾರ ಇಂತಹ ಘಟನೆಗಳ ವಿರುದ್ದ ತತಕ್ಷಣ ಕ್ರಮ ಕೈಗೊಳ್ಳಬೇಕು, ಹೋಂ ಗಾರ್ಡ್ ಕೆಲಸದ ಆದೇಶ ಪಾಲಿಸುತ್ತಾನೆ ಅವನನ್ನ ಬಲಿಪಶು ಮಾಡುವ ಬದಲು ಅಧಿಕಾರಿಗಳ ತಲೆದಂಡವಾಗಬೇಕು.
ನಿರ್ದೇಶಕ ಅನುರಾಗ್ ಕಶ್ಯಪ್ ರವರು ಬ್ರಾಹ್ಮಣರ ವಿರುದ್ದ ಅವಹೇಳನಕಾರಿ ಹೇಳಿಕೆ ನೀಡಿರುವುದು ಖಂಡನೆ ವ್ಯಕ್ತಪಡಿಸುತ್ತೇವೆ ಅವರ ಮೇಲೆ ಪೊಲೀಸ್ ಠಾಣೆಗೆ ದೂರು ನೀಡಲಾಗುವುದು. ಬ್ರಾಹ್ಮಣರು ಸಮಾಜ, ದೇಶ ಜನರಿಗೆ ಒಳ್ಳೆಯದಾಗಬೇಕು ಎಂದು ಪೂಜೆ, ಹೋಮಹವನ ಮಾಡುತ್ತಾರೆ ಎಂದು ಹೇಳಿದರು.
ಜಿಲ್ಲಾ ಪ್ರತಿನಿಧಿಗಳಾದ ಜಿ.ಎಸ್.ನಾಗೇಶ್, ಸತೀಶ್ ಉರಾಳ್,ಕೆ.ಎನ್.ರವಿಕುಮಾರ್ ,ಅಂಬಿಕಾ ರಾಮಚಂದ್ರ, ಮಂಜುನಾಥ್ ವಿಪ್ರಮುಖಂಡರುಗಳು ಉಪಸ್ಥಿತರಿದ್ದರು.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ಅಧ್ಯಕ್ಷರಾದ ಎಸ್.ರಘುನಾಥ್ ರವರು, ಹಿರಿಯ ಉಪಾಧ್ಯಕ್ಷರಾದ ಆರ್.ಲಕ್ಷ್ಮಿಕಾಂತ್ ರವರು ಭಾಗವಹಿಸಿದ್ದರು. ವಿಪ್ರ ಮುಖಂಡರುಗಳಾದ ರವಿಶಂಕರ, ಶಂಕರನಾರಾಯಣ್ ಶಾಸ್ತ್ರಿ, ಶ್ರೀನಿವಾಸಮೂರ್ತಿ ಜೋಯಿಸ್ ರವರು ಉಪಸ್ಥಿತರಿದ್ದರು.