ನಮ್ಮ ಮುಂದಿರುವ ಏಕೈಕ ಗುರಿ ಡಿಎಂಕೆಯನ್ನು ಅಧಿಕಾರದಿಂದ ಇಳಿಸುವುದು: ಅಣ್ಣಾಮಲೈ

varthajala
0

 ಉಡುಪಿ: ತಮಿಳುನಾಡು ಬಿಜೆಪಿ ರಾಜ್ಯ ಘಟಕ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿಲ್ಲ. ಆದರೆ, ಮುಂದೆ ನಡೆಯಲಿರುವ ಅಧ್ಯಕ್ಷನ ಚುನಾವಣೆಯಲ್ಲಿ ನಾನು ಸ್ಪರ್ಧಿ ಅಲ್ಲ ಎಂದು ಬಿಜೆಪಿ ನಾಯಕ ಕೆ ಅಣ್ಣಾಮಲೈ ಅವರು ಬುಧವಾರ ಸ್ಪಷ್ಟಪಡಿಲಿದ್ದಾರೆ.

ಉಡುಪಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತಾಡಿದ ಅವರು, ರಾಜ್ಯಾಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿಲ್ಲ. ಅವಧಿ ಮುಗಿದಿದೆ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷನ ಚುನಾವಣೆ ಇನ್ನು ನಡೆದಿಲ್ಲ, ರಾಜ್ಯ ಘಟಕದ ಅಧ್ಯಕ್ಷನ ಚುನಾವಣೆ ಯಾವುದೇ ಸಮಯ ನಡೆಯಬಹುದು, ಆದರೆ, ಮುಂದಿನ ಅವಧಿಗೆ ಅಧ್ಯಕ್ಷ ಚುನಾವಣೆ ಪ್ರಕ್ರಿಯೆಯಲ್ಲಿ ನಾನು ಪಾಲ್ಗೊಳ್ಳುತ್ತಿಲ್ಲ. ಹಾಗೆಂದ ಮಾತ್ರಕ್ಕೆ ತಮಿಳುನಾಡಿನಲ್ಲಿ ಬಿಜೆಪಿ ಅಧಿಕಾರಕ್ಕೆ ಬಾರದು ಎಂದಲ್ಲ, ರಾಷ್ಟ್ರೀಯ ಅಧ್ಯಕ್ಷರ ಚುನಾವಣೆ ಘೋಷಣೆಯ ಅನಂತರದಲ್ಲಿ ಯಾವಾಗ ಬೇಕಾದರೂ ರಾಜ್ಯಾಧ್ಯಕ್ಷರ ಚುನಾವಣೆ ಆಗಬಹುದು ಎಂದು ಹೇಳಿದರು.

ತಮಿಳುನಾಡಿನಲ್ಲಿ ಚುನಾವಣೆ ಸಮೀಪಿಸುತ್ತಿದೆ. ಬಹಳ ವರ್ಷದಿಂದ ನಾವು ತಾಳ್ಮೆಯಿಂದ ಕಾದಿದ್ದೇವೆ, ಕಾಯುತ್ತೇವೆ. ಇನ್ನೂ 20, 30 ವರ್ಷ ಬೇಕಾದರೂ ಆಗಲಿ, ಅಧಿಕಾರಕ್ಕೆ ಬರುತ್ತೇವೆ. ಪಕ್ಷದ ನಿರ್ಧಾರಕ್ಕೆ ಕಾರ್ಯಕರ್ತರಾಗಿ ಒಪ್ಪಿಗೆ ಕೊಡಬೇಕು.


ನಮ್ಮ ಮುಂದಿರುವ ಏಕೈಕ ಗುರಿ ಡಿಎಂಕೆಯನ್ನು ಅಧಿಕಾರದಿಂದ ಇಳಿಸುವುದು. 

ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಮಾತನಾಡಿ, ಜನರು ಈ ಪ್ರತಿಭಟನೆಯನ್ನು ಬೆಂಬಲಿಸುತ್ತಿದ್ದಾರೆ. ಇದರಿಂದ ಈಗಲೇ ಬಿಜೆಪಿ ಅಧಿಕಾರಕ್ಕೆ ಬರುತ್ತದೆ ಅಥವಾ ಶೇ.100 ರಷ್ಟು ಯಶಸ್ಸು ಸಿಗುತ್ತದೆ ಎನ್ನಲಾಗದು. ಆದರೆ, ಜನ ಬಿಜೆಪಿ ಜತೆಗೆ ಸೇರಿ ಕಾಂಗ್ರೆಸ್‌ ಮುಕ್ತ ಕರ್ನಾಟಕಕ್ಕೆ ಬೆಂಬಲ ನೀಡಲಿದ್ದಾರೆ ಎಂದರು.

ಎಲ್‌ಪಿಜಿ ಬೆಲೆ ಏರಿಕೆ ಕುರಿತು ಮಾತನಾಡಿ, ಪಿ.ಚಿದಂಬರ್‌ ಸಹಿತ ಕಾಂಗ್ರೆಸ್‌ ಹಿರಿಯ ನಾಯಕರು, ತಜ್ಞರು ಜಾಗತಿಕ ಮಟ್ಟ ದಲ್ಲಿನ ಅನಿಲದರ ಏರಿಕೆಯ ಬಗ್ಗೆ ಮಾತನಾಡುತ್ತಿಲ್ಲ. ಅಡುಗೆ ಅನಿಲವನ್ನು ನಾವು ವಿದೇಶದಿಂದಲೇ ಹೆಚ್ಚು ಆಮದು ಮಾಡಿಕೊಳ್ಳುತ್ತಿದ್ದು, ನಮ್ಮ ದೇಶದಲ್ಲೂ ಬಹುಪಾಲು ಮನೆಗಳಲ್ಲಿ ಗ್ಯಾಸ್‌ ಬಳಸಲಾಗುತ್ತಿದೆ. ಈ ಏರಿಕೆ ತಾತ್ಕಾಲಿಕ ಮಾತ್ರ. ಜನರಿಗೆ ಹೆಚ್ಚುವರಿ ಹೊರೆಯಾಗದಂತೆ ಕೇಂದ್ರ ಸರಕಾರ ಗಮನ ಹರಿಸಲಿದೆ ಎಂದರು.

Post a Comment

0Comments

Post a Comment (0)