ಬೆಂಗಳೂರು: ಸಾಮಾಜಿಕ, ಆರ್ಥಿಕ ಮತ್ತು ಶೈಕ್ಷಣಿಕ ಸಮೀಕ್ಷೆಯ ವರದಿಯನ್ನು ಶುಕ್ರವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಯಿತು. ಈ ವಿವಾದಾತ್ಮಕ ಸಮೀಕ್ಷೆ ಕುರಿತು ವಿಸ್ತೃತವಾಗಿ ಚರ್ಚಿಸಲು ಇದೇ 17 ರಂದು ವಿಶೇಷ ಸಂಪುಟ ಸಭೆಯನ್ನು ಕರೆಯಲಾಗಿದೆ.
ಈ ಕ್ರಮವು ರಾಜಕೀಯ ವೀಕ್ಷಕರನ್ನು ದಿಗ್ಭ್ರಮೆಗೊಳಿಸಿದೆ. ಹಿಂದುಳಿದ ಜಾತಿ ನಾಯಕರು ರಾಜ್ಯದಲ್ಲಿ ಅಧಿಕಾರ ಬದಲಾಯಿಸಲು ಸಿದ್ಧವಾಗಿರುವವರಿಗೆ ಸಿದ್ದರಾಮಯ್ಯ ನೀಡಿರುವ "ಐತಿಹಾಸಿಕ ಮಾಸ್ಟರ್‌ಸ್ಟ್ರೋಕ್" ಎಂದು ಬಣ್ಣಿಸಿದ್ದಾರೆ.
ಸಿದ್ದರಾಮಯ್ಯನವರು ಹಿಂದೆ ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಅಂದಿನ ಎಚ್. ಕಾಂತರಾಜ ನೇತೃತ್ವದ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಈ ಸಮೀಕ್ಷೆಯ ಹೊಣೆಯನ್ನು ವಹಿಸಿದ್ದರು.
ಇನ್ನೂ ಜಾತಿ ಗಣತಿ ವರದಿ ಜಾರಿಗೆ ಲಿಂಗಾಯತ ನಾಯಕರಾದ ಈಶ್ವರ್ ಖಂಡ್ರೆ ಮತ್ತು ಎಂ.ಬಿ. ಪಾಟೀಲ್ ಸೇರಿದಂತೆ ಕೆಲವು ಸಚಿವರು ಒಗ್ಗಟ್ಟಿನಿಂದ ನಿಂತರೆ, ಡಿಸಿಎಂ ಡಿಕೆ ಶಿವಕುಮಾರ್ ವಿಭಿನ್ನ ಹಾದಿ ಹಿಡಿದಿದ್ದಾರೆ. ಸಮೀಕ್ಷೆಯ ವೈಜ್ಞಾನಿಕ ಸಿಂಧುತ್ವದ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ.
ಆದರೆ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಹೈಕಮಾಂಡ್‌ಗೆ ಮಾಹಿತಿ ನೀಡಿದ್ದು , ತಮ್ಮ ಆಪ್ತರ ಸಂಪೂರ್ಣ ಬೆಂಬಲದೊಂದಿಗೆ ಮುಂದುವರಿಯುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಅಹಮದಾಬಾದ್‌ನಲ್ಲಿನಡೆದ ಎಐಸಿಸಿ ಕಾರ್ಯಕಾರಿಯಲ್ಲಿ ಅಂಚಿನಲ್ಲಿರುವವರನ್ನು ಸಬಲೀಕರಣಗೊಳಿಸಬೇಕು ಎಂಬ ವಿಷಯ ಪ್ರಸ್ತಾಪವಾದಾಗ ನಾವು ಈ ವಿಚಾರದ ಬಗ್ಗೆ ಚರ್ಚಿಸಿದೆವು.
ನಾವು ಕಾಂತರಾಜ್ ವರದಿಯನ್ನು ವಿರೋಧಿಸುತ್ತೇವೆ. ಇದು ಅವೈಜ್ಞಾನಿಕ. ಸರ್ಕಾರದ ವೀರಶೈವ-ಲಿಂಗಾಯತ ಸಚಿವರನ್ನು ಭೇಟಿ ಮಾಡಿ, ವರದಿಯಿಂದ ಎದುರಾಗುವ ಅಪಾಯಗಳ ಕುರಿತು ವಿವರಿಸಿದ್ದೇವೆ. ನಮ್ಮ ಸಮುದಾಯದ ಹಿತಾಸಕ್ತಿಗಳಿಗೆ ಹಾನಿಯಾದರೆ, ನಮ್ಮ ಸಾಂವಿಧಾನಿಕ ಹಕ್ಕುಗಳನ್ನು ರಕ್ಷಿಸಿಕೊಳ್ಳಲು ಬೀದಿಗಿಳಿಯಬೇಕಾಗುತ್ತದೆ ಎಂದು ಎಚ್ಚರಿಸಿದ್ದಾರೆ. ಇದು ಮುಂದಿನ ರಾಜಕೀಯ ಸಮರಕ್ಕೆ ನಾಂದಿ ಹಾಡುವ ಸಾಧ್ಯತೆಯಿದೆ.
1994 ರಲ್ಲಿ, ವೀರಪ್ಪ ಮೊಯಿಲಿ ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ, ವೆಂಕಟಸ್ವಾಮಿ ವರದಿಯ ನಂತರ ಅಂದಿನ ರಾಜ್ಯ ಸರ್ಕಾರ ಒತ್ತಡಕ್ಕೆ ಮಣಿಯಿತು. ಆದರೆ ಈ ಬಾರಿ ಪರಿಸ್ಥಿತಿ ವಿಭಿನ್ನವಾಗಿದೆ. ಹಿಂದುಳಿದ ಸಮುದಾಯಗಳು ಮತ್ತು ಅಹಿಂದ ಬಣವು ಹಿಂದೆಂದಿಗಿಂತಲೂ ಹೆಚ್ಚು ಒಗ್ಗಟ್ಟಾಗಿದೆ ಮತ್ತು ಹೆಚ್ಚು ಶಕ್ತಿಶಾಲಿಯಾಗಿದೆ, ಸಿದ್ದರಾಮಯ್ಯನವರ ಬೆನ್ನೆಲುಬಾಗಿ ನಿಂತಿದೆ ಎಂದು ಹಿರಿಯ ಹಿಂದುಳಿದ ಸಮುದಾಯದ ನಾಯಕರೊಬ್ಬರು ತಿಳಿಸಿದ್ದಾರೆ.