ಉಗ್ರ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು ಸಿಎಂ ಸಿದ್ದರಾಮಯ್ಯ

varthajala
0





 ಬೆಂಗಳೂರು: ನಮ್ಮ ದೇಶದಲ್ಲಿ ಉಗ್ರ ಚಟುವಟಿಕೆಯನ್ನು ಸಂಪೂರ್ಣವಾಗಿ ಮಟ್ಟ ಹಾಕಬೇಕು. ಕೇಂದ್ರ ಸರ್ಕಾರ ಎಲ್ಲಾ ಉಗ್ರರನ್ನು ನಾಶಪಡಿಸುವ ಕೆಲಸ ಮಾಡಬೇಕು. ಕೇಂದ್ರ ಸರ್ಕಾರದ ಜತೆ ನಾವೆಲ್ಲ ಇದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಮೊನ್ನೆ ಮಂಗಳವಾರ ಮಧ್ಯಾಹ್ನ ಪಹಲ್ಗಾಂನಲ್ಲಿ ಉಗ್ರ ದಾಳಿಯಲ್ಲಿ ಮೃತಪಟ್ಟ ಭರತ್​ ಭೂಷಣ್ ಅವರ ಪಾರ್ಥಿವ ಶರೀರದ​ ಅಂತಿಮ ದರ್ಶನ ಪಡೆದ ಬಳಿಕ ಬೆಂಗಳೂರಿನ ಮತ್ತಿಕೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಅಮಾನೀಯವಾದ ಕೃತ್ಯ ಇದು, ಮನುಷ್ಯರು ಮಾಡುವ ಕೆಲಸವಲ್ಲ, ಇದನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದರು.

ಭರತ್​ ಭೂಷಣ್ ಅವರನ್ನು ಹಾಡಹಗಲೇ ಹೆಂಡತಿ, ಮಗುವಿನ ಕಣ್ಣೇದುರೇ ಶೂಟ್ ಮಾಡಿ ಹತ್ಯೆ ಮಾಡಿದ್ದಾರೆ. ಕೆಲ ವರ್ಷಗಳ ಹಿಂದೆ ಪುಲ್ವಾಮಾದಲ್ಲಿ ಸೈನಿಕರು ಉಗ್ರರಿಂದ ಹುತಾತ್ಮರಾದರು. ಈಗ ಮುಗ್ಧ ನಾಗರಿಕರು ಬಲಿಯಾಗಿದ್ದಾರೆ, ಇನ್ನೆಂದೂ ಇಂತಹ ಘಟನೆ ಜಮ್ಮು-ಕಾಶ್ಮೀರದಲ್ಲಾಗಲಿ, ದೇಶದ ಬೇರೆ ಯಾವ ಕಡೆಯಲ್ಲಾಗಲಿ ನಡೆಯಬಾರದು. ಈ ರೀತಿಯ ಘಟನೆ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು. ನಮ್ಮ ದೇಶದಲ್ಲಿ ಉಗ್ರರು ಇರದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು, ಕೇಂದ್ರ ಗುಪ್ತಚರ ಇಲಾಖೆ ಸೂಕ್ತವಾಗಿ ಕೆಲಸ ಮಾಡಬೇಕು ಎಂದರು.

Post a Comment

0Comments

Post a Comment (0)