ಉಗ್ರರ ದಾಳಿ: ಜಮೀರ್ ಅಹಮದ್ ಖಾನ್ ಖಂಡನೆ

varthajala
0

 


ಬೆಂಗಳೂರು : ಜಮ್ಮು-ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ಕೃತ್ಯ ಅತ್ಯಂತ ಹೇಯ ಹಾಗೂ ಅಮಾನವೀಯ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ತೀವ್ರ ವಾಗಿ ಖಂಡಿಸಿದ್ದಾರೆ.

ಈ ದಾಳಿಯಲ್ಲಿ‌ ಇಬ್ಬರು ಕನ್ನಡಿಗರು ಸೇರಿದಂತೆ 28 ಮಂದಿ ಬಲಿಯಾಗಿರುವುದು ಅತೀವ ನೋವು ತಂದಿದೆ.
ಪಹಲ್ಗಾಮ್‌ ಉಗ್ರರ ದಾಳಿ ಈ ಹಿಂದಿನ ಶಕ್ತಿಗಳನ್ನು ಭಾರತೀಯರೆಲ್ಲರೂ ಒಗ್ಗಟ್ಟಾಗಿ ಎದುರಿಸಬೇಕಾಗಿದೆ ಎಂದು ತಿಳಿಸಿದ್ದಾರೆ.

ಜಮ್ಮು- ಕಾಶ್ಮೀರದಲ್ಲಿ 370 ವಿಧಿ ರದ್ದು ಗೊಂಡ ನಂತರ ಶಾಂತಿ ನೆಲೆಸಿದೆ ಎಂದು ಹೇಳಿದ್ದ ಕೇಂದ್ರ ಸರ್ಕಾರ ದೇಶದ ಭದ್ರತೆಯ ವಿಚಾರದಲ್ಲಿ ಬಿಗಿ ಕ್ರಮ ಕೈಗೊಳ್ಳಬೇಕಿದೆ ಎಂದು ಹೇಳಿದ್ದಾರೆ.

ಕೃತ್ಯದಲ್ಲಿ ಬಲಿಯಾದವರ ಕುಟುಂಬಗಳಿಗೆ ದುಃಖ ಭರಿಸುವ ಶಕ್ತಿ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Post a Comment

0Comments

Post a Comment (0)