ಉಬರ್, ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆ ಸ್ಥಗಿತ: ಸಚಿವ ರಾಮಲಿಂಗಾರೆಡ್ಡಿ

varthajala
0

 




ಕರ್ನಾಟಕ ಉಚ್ಚ ನ್ಯಾಯಾಲಯದ ಆದೇಶದಂತೆ, ರಾಜ್ಯಾದ್ಯಂತ ಉಬರ್ ಮತ್ತು ರ‍್ಯಾಪಿಡೋ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದ್ದಾರೆ.

ಕರ್ನಾಟಕ ಉಚ್ಚ ನ್ಯಾಯಾಲಯವು ಉಬರ್, ರ‍್ಯಾಪಿಡೋ ಸೇರಿದಂತೆ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸುವಂತೆ ಆದೇಶಿಸಿತ್ತು. ಈ ಆದೇಶವನ್ನು ಕಾರ್ಯಗತಗೊಳಿಸಲು ಸಾರಿಗೆ ಸಚಿವರು ಸಾರಿಗೆ ಇಲಾಖೆಯ ಕಾರ್ಯದರ್ಶಿ, ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರಿಗೆ ಪತ್ರ ಬರೆದು ಸೂಚನೆ ನೀಡಿದ್ದಾರೆ.

ರಿಟ್ ಅರ್ಜಿದಾರರಾದ (M/s Uber India Systems Pvt. Ltd., M/s Roppen Transportation Services Pvt. Ltd., ಮತ್ತು M/s ANI Technologies Pvt. Ltd.) ಸಂಸ್ಥೆಗಳಿಗೆ ತಮ್ಮ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಇಂದಿನಿಂದ ಆರು [6] ವಾರಗಳ ಕಾಲಾವಕಾಶ ನೀಡಲಾಗಿದೆ. ಈ ಆರು ವಾರಗಳ ನಂತರ ಎಲ್ಲ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸುವಂತೆ ರಾಜ್ಯ ಸರ್ಕಾರವು ಖಾತರಿಪಡಿಸಬೇಕು.”

ಮೇಲ್ಕಂಡ ಆದೇಶದಂತೆ, M/s Uber India Systems Pvt. Ltd., M/s Roppen Transportation Services Pvt. Ltd. ಮತ್ತು M/s ANI Technologies Pvt. Ltd. ಸಂಸ್ಥೆಗಳು ತಮ್ಮ ಬೈಕ್ ಟ್ಯಾಕ್ಸಿ ಸೇವೆಗಳನ್ನು ಸ್ಥಗಿತಗೊಳಿಸಲು ಆರು ವಾರಗಳ ಕಾಲಾವಕಾಶ ಪಡೆದಿವೆ. ಈ ಆದೇಶವನ್ನು ಕಾರ್ಯಗತಗೊಳಿಸಲು ಸಾರಿಗೆ ಇಲಾಖೆಗೆ ಸೂಚನೆ ನೀಡಲಾಗಿದೆ.

Post a Comment

0Comments

Post a Comment (0)