ಐ.ಎ.ಎಸ್ (IAS) ಮತ್ತು ಕೆ.ಎ.ಎಸ್ (KAS) ಪರೀಕ್ಷಾ ತರಬೇತಿ ಉದ್ಘಾಟನಾ ಸಮಾರಂಭ

varthajala
0

ಬೆಂಗಳೂರು, ಏಪ್ರಿಲ್ 16, (ಕರ್ನಾಟಕ ವಾರ್ತೆ): ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ವತಿಯಿಂದ ಏಪ್ರಿಲ್ 17ರಂದು ಬೆಳಿಗ್ಗೆ 11.00 ಗಂಟೆಗೆ ಮೈಸೂರಿನ ಮುಕ್ತ ಗಂಗೋತ್ರಿಯ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕಾವೇರಿ ಸಭಾಂಗಣದಲ್ಲಿ ಐ.ಎ.ಎಸ್. ಮತ್ತು ಕೆ.ಎ.ಎಸ್. ಪರೀಕ್ಷಾ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದ್ದು, ತರಬೇತಿ ಶಿಬಿರದ ಉದ್ಘಾಟನೆಯನ್ನು ಮೈಸೂರು ದಕ್ಷಿಣ ವಲಯದ ಪೊಲೀಸ್ ಮಹಾ ನಿರೀಕ್ಷಕರಾದ ಡಾ. ಎಂ.ಬಿ. ಬೋರಲಿಂಗಯ್ಯ ಅವರು ನೆರವೇರಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಮೈಸೂರು ಮಹಾನಗರ ಪಾಲಿಕೆಯ ಉಪ ಆಯುಕ್ತರಾದ ಜಿ.ಎಸ್. ಸೋಮಶೇಖರ್ (G.S.Somashekhar) ಅವರು ಪರೀಕ್ಷಾ ಸಿದ್ದತೆಯ ಬಗ್ಗೆ ಮಾತನಾಡಲಿದ್ದು, ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಮಾನ್ಯ ಕುಲಪತಿಗಳಾದ ಪ್ರೊ.ಶರಣಪ್ಪ ಹಲಸೆ ಅವರು ಅಧ್ಯಕ್ಷತೆ ವಹಿಸಲಿರುವರು.

ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕುಲಸಚಿವರಾದ ಪೊ.ಕೆ.ಬಿ.ಪ್ರವೀಣ (B.K. Praveen) ಸೇರಿದಂತೆ ವ್ಯವಸ್ಥಾಪನಾ ಮಂಡಲಿ ಸದಸ್ಯರುಗಳು ಮತ್ತು ಶಾಸನಬದ್ಧ ಅಧಿಕಾರಿಗಳು ಉಪಸ್ಥಿತರಿರುವರು ಎಂದು ಸಂಯೋಜನಾಧಿಕಾರಿ ಜೈನಹಳ್ಳಿ ಸತ್ಯನಾರಾಯಣಗೌಡ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Post a Comment

0Comments

Post a Comment (0)