ಜನಿವಾರ ಕತ್ತರಿಸಿ ಕೈಗೆ ಕೊಟ್ಟ ಸಿಬ್ಬಂದಿ ವಿರುದ್ಧ ಸೂಕ್ತ ಕ್ರಮಕ್ಕೆ ಆಗ್ರಹ

varthajala
0

ಧಾರವಾಡ: ಶಿವಮೊಗ್ಗ, ಬೀದರ್ ಬಳಿಕ ಇದೀಗ ಧಾರವಾಡದಲ್ಲಿಯೂ ಜನಿವಾರ ಕತ್ತರಿಸಿ ಸಿಇಟಿ ಪರೀಕ್ಷೆಗೆ ಅವಕಾಶ ಕೊಟ್ಟಿರುವ ಘಟನೆಯೊಂದು ತಡವಾಗಿ ಬೆಳಕಿಗೆ ಬಂದಿದೆ. ಧಾರವಾಡ ಜಿಲ್ಲೆಯ ಹುರಕಡ್ಲಿ ಕಾಲೇಜಿನ ಪರೀಕ್ಷಾ ಕೇಂದ್ರದಲ್ಲಿ ಈ ಘಟನೆ ನಡೆದಿದೆ.

ಧಾರವಾಡ ನಗರದ ಜೆಎಸ್‌ಎಸ್ (JSS) ಕಾಲೇಜಿನ ವಿದ್ಯಾರ್ಥಿ ನಂದನ್ ಏರಿ ಸಿಇಟಿ ಪರೀಕ್ಷೆ ಬರೆಯಲು ತೆರಳಿದ್ದು, ಈ ವೇಳೆ ವಿದ್ಯಾರ್ಥಿಗಳ ತಪಾಸಣೆ ಮಾಡುವಾಗ ಪರೀಕ್ಷಾ ಕೇಂದ್ರದ ಸಿಬ್ಬಂದಿಯೊಬ್ಬರು ನಂದನ್ ಎಂಬ ಅಭ್ಯರ್ಥಿ ಹಾಕಿಕೊಂಡಿದ್ದ ಜನಿವಾರವನ್ನು ಗಮನಿಸಿದ್ದಾರೆ.

ಕಳೆದೆರಡು ದಿನಗಳಿಂದ ಮಾಧ್ಯಮಗಳಲ್ಲಿ ಬರುತ್ತಿದ್ದ ಶಿವಮೊಗ್ಗ, ಬೀದರ್ ಜನಿವಾರದ ಸುದ್ದಿಗಳನ್ನು ಗಮನಿಸಿದ್ದ ಹುಡುಗ ತನಗಾಗಿದ್ದರ ಕುರಿತು ತನ್ನ ತಂದೆಗೆ ತಿಳಿಸಿದ್ದಾನೆ.

ಇದನ್ನು ತಿಳಿದ ತಂದೆ ಆಕ್ರೋಶಗೊಂಡಿದ್ದು, ಇದೇ ಕಾರಣದಿಂದ ಮಗನಿಗೆ ಸರಿಯಾಗಿ ಪರೀಕ್ಷೆ ಬರೆಯಲು ಆಗಿಲ್ಲ ಎಂದು ಕಿಡಿಕಾರಿದ್ದಾರೆ.

ಘಟನೆ ಸಬಂಧ ಪ್ರತಿಕ್ರಿಯೆ ನೀಡಿರುವ ಸಚಿವ ಸಂತೋಷ್ ಲಾಡ್, ಇಂತಹ ಘಟನೆಗಳ ಬಗ್ಗೆ ಲಿಖಿತ ದೂರುಗಳು ಬಂದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

ಇಂತಹ ಕೃತ್ಯಗಳಲ್ಲಿ ಭಾಗಿಯಾಗಿರುವವರು ಸರ್ಕಾರಿ ಅಧಿಕಾರಿಗಳೋ ಅಥವಾ ಖಾಸಗಿ ಉದ್ಯೋಗಿಗಳೋ ಎಂಬುದು ಸ್ಪಷ್ಟವಾಗಿಲ್ಲ. ಈ ಸಮಸ್ಯೆಯನ್ನು ಬಗೆಹರಿಸಲಾಗುವುದು ಮತ್ತು ತಪ್ಪಿತಸ್ಥರೆಂದು ಕಂಡುಬಂದವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

Post a Comment

0Comments

Post a Comment (0)