ಬೆಂಗಳೂರು: ಡಿ ಬಾಸ್ ದರ್ಶನ್ ಗೆ ಕೋರ್ಟ್ ಖಡಕ್ ವಾರ್ನಿಂಗ್ ಕೊಟ್ಟಿದ್ದು, ಮುಂದಿನ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ,
ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮೇ.20 ಕ್ಕೆ ಕೋರ್ಟ್ ವಿಚಾರಣೆ ಮುಂದೂಡಿಕೆ ಮಾಡಿದೆ,
ಬೆಂಗಳೂರಿನ 57 ನೇ ಸಿಸಿಹೆಚ್ ಕೋರ್ಟ್ ನಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಭಂಧಿಸಿದ ವಿಚಾರಣೆ ನಡೆದಿದೆ,
ಅದರೆ ಇಂದು ಕೋರ್ಟ್ ಗೆ ನಟ ದರ್ಶನ್ ಗೈರಾಗಿದ್ದರು, ಬೆನ್ನುನೋವಿನ ಕಾರಣ ಹೇಳಿ ವಿಚಾರಣೆಯಿಂದ ವಿನಾಯಿತಿ ಕೋರಿ ಕೋರ್ಟ್ ಗೆ ನಟ ದರ್ಶನ್ ಪರ ವಕೀಲರು ಅರ್ಜಿ ಸಲ್ಲಿಸಿದ್ದರು, ಇಂತಹ ನೆಪವೊಡ್ಡಿ ಯಾವುದೇ ಕಾರಣಕ್ಕೂ ವಿಚಾರಣೆಗೆ ಗೈರಾಗಬಾರುದ ಎಂದು ನಟ ದರ್ಶನ್ ಪರ ವಕೀಲರಿಗೆ ಕೋರ್ಟ್ ಎಚ್ಚರಿಕೆ ನೀಡಿದೆ.