ಬೆಂಗಳೂರು : ಪರಮಪೂಜ್ಯ ಶ್ರೀ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಜಯನಗರದ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಗುರುವಾರ ಸಂಜೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ನೆಲಮಂಗಲದ ಶ್ರೀ ಗಣೇಶ ನೃತ್ಯಾಲಯ ಸಂಗೀತ ಮತ್ತು ನೃತ್ಯ ಶಾಲೆಯ ಗುರುಗಳಾದ ವಿದುಷಿ ಶ್ರೀಮತಿ ಭಾವನಾ ಗಣೇಶ್ ಮತ್ತು ವಿದ್ವಾನ್ ಶ್ರೀ ಎಂ.ಡಿ. ಗಣೇಶ್ ದಂಪತಿಗಳು ತಮ್ಮ ನೃತ್ಯ ಶಾಲೆಯ ಸುಮಾರು 35 ವಿದ್ಯಾರ್ಥಿಗಳೊಂದಿಗೆ ನಡೆಸಿಕೊಟ್ಟ ಭರತನಾಟ್ಯ ಪ್ರದರ್ಶನದಲ್ಲಿ "ಶ್ರೀಕೃಷ್ಣ ಲೀಲಾ" ನೃತ್ಯ ಪ್ರದರ್ಶನ ಕಿಕ್ಕಿರಿದು ನೆರೆದಿದ್ದ ಭಕ್ತಾದಿಗಳ ಕಣ್ಮನ ಸೆಳೆಯಿತು ಎಂದು ಶ್ರೀ ನಂದಕಿಶೋರ್ ಆಚಾರ್ಯರು ತಿಳಿಸಿದರು.
Post a Comment
0Comments