ವಿಜಯನಗರದ ಪ್ರಖ್ಯಾತ ರಾಜ ಕೃಷ್ಣದೇವರಾಯರ ಸಮಾಧಿ ಸ್ಥಳದಲ್ಲಿ ಮಾಂಸ ಮಾರಾಟ ನಡೆಯುತ್ತಿರುವುದಕ್ಕೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಕುರಿತು ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಇದು ಕೇವಲ ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಭಾರತೀಯ ಇತಿಹಾಸದಲ್ಲಿ ಶ್ರೇಷ್ಠ ಆಡಳಿತಗಾರರಾಗಿದ್ದ ವಿಜಯನಗರದ ಶ್ರೀ ಕೃಷ್ಣದೇವರಾಯರ ಸಮಾಧಿಯ ಶೋಚನೀಯ ಸ್ಥಿತಿಯಿದು. ಕೆಲವರು ಈ ಪವಿತ್ರ ಸ್ಥಳವನ್ನು ಮಾಂಸದ ಮಾರುಕಟ್ಟೆಯಾಗಿ ಪರಿವರ್ತಿಸಿದ್ದಾರೆ.
ವಿಜಯನಗರ ಸಾಮ್ರಾಜ್ಯವನ್ನು ವಿಸ್ತರಿಸಿದ ಪರಾಕ್ರಮಿ, ಕಲೆ ಮತ್ತು ಸಾಹಿತ್ಯದ ಪೋಷಕರಾದ ಶ್ರೀ ಕೃಷ್ಣದೇವರಾಯರ ಸಮಾಧಿಗೆ ಈ ರೀತಿಯ ದಿವ್ಯ ನಿರ್ಲಕ್ಷ್ಯ ಏಕೆ?
ಇದು ಕನ್ನಡಿಗರಿಗೆ ಮಾತ್ರವಲ್ಲ, ಇಡೀ ರಾಷ್ಟ್ರಕ್ಕೆ ಮಾಡಿದ ಅವಮಾನವಾಗಿದೆ. ಸಮಾಧಿಯ ಪಾವಿತ್ರ್ಯತೆಯನ್ನು ಹಾಳುಮಾಡುತ್ತಿರುವ ಮಾಂಸ ಮಾರಾಟಗಾರರನ್ನು ಜಿಲ್ಲಾಡಳಿತವು ತಕ್ಷಣವೇ ಜಾಗ ಖಾಲಿ ಮಾಡುವಂತೆ ಸೂಚಿಸಬೇಕು. ಜೊತೆಗೆ, ಈ ಸ್ಥಳದ ನೈರ್ಮಲ್ಯ ಮತ್ತು ಸಮಾಧಿಯ ಪಾವಿತ್ರ್ಯತೆಯನ್ನು ಕಾಪಾಡಲು ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು.