ಬೆಂಗಳೂರು: ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದ ಮಹತ್ವದ ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಇದೀಗ ಮತ್ತಷ್ಟು ಸೌಲಭ್ಯ ನೀಡಲು ಸರ್ಕಾರ ಮುಂದಾಗಿದ್ದು, ಇನ್ಮುಂದೆ ಬಸ್ ನಲ್ಲಿ ಪ್ರಯಾಣ ಮಾಡಲು ಆಧಾರ್ ಕಾರ್ಡ್ ಅಗತ್ಯವಿಲ್ಲ ಎನ್ನಲಾಗಿದೆ,
ರಾಜ್ಯ ಸರ್ಕಾರದ ಮಹತ್ವದ ಯೋಜೆನೆಗಳಲ್ಲಿ ಒಂದಾದ ಶಕ್ತಿ ಯೋಜನೆಯ ಲಾಭವನ್ನು ಇನ್ನಷ್ಟು ಸರಳಗೊಳಿಸಲು ಸರ್ಕಾರ ಸ್ಮಾರ್ಟ್ ಕಾರ್ಡ್ ವಿತರಣೆ ಮಾಡಲು ಮುಂದಾಗಿದ್ದು, ಎರಡು ತಿಂಗಳೊಳಗೆ ರಾಜ್ಯದ ಎಲ್ಲಾ ಅರ್ಹ ಮಹಿಳೆಯರಿಗೆ ಉಚಿತವಾಗಿ ಸ್ಮಾರ್ಟ್ ಕಾರ್ಡ್ ನೀಡಲಾಗುತ್ತದೆ ಎಂದು ವರದಿಯಾಗಿದೆ,
ಸ್ಮಾರ್ಟ್ ಪಡೆಯಲು ಮಹಿಳೆಯರು ಗ್ರಾಮ ಒನ್ ಅಥವಾ ಬೆಂಗಳೂರು ಒನ್ ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಬೇಕಾಗಿದೆ,
ಅಥವಾ ಸೇವಾಸಿಂಧು ವೆಬ್ ಸೈಟ್ ಬಳಸಿ ಅನ್ ಲೈನ್ ಮೂಲಕವೂ ಅರ್ಜಿ ಸಲ್ಲಿಸಲು ಅವಕಾಶವಿದೆ, ಅರ್ಜಿ ಸಲ್ಲಿಸಿದ ನಂತರ ಪ್ರಿಂಟ್ ಮಾಡಿದ ರಸೀದಿಯೇ ಸ್ಮಾರ್ಟ್ ಕಾರ್ಡ್ ಎಂದು ಪರಿಗಣಿಸಲಾಗುತ್ತದೆ, ಇದು ಶಾಶ್ವತ ಪಾಸ್‌ನಂತೆ ಕಾರ್ಯನಿರ್ವಹಿಸುತ್ತದೆ....