ವಿಪ್ರ ಸಮುದಾಯಕ್ಕೆ ಅಪಮಾನ : ಎಸ್.ರಘುನಾಥ್

varthajala
0

 



ಬೆಂಗಳೂರು: ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾದ ವತಿಯಿಂದ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ತೆಗೆದು ಪರೀಕ್ಷೆ ಬರೆಯುವಂತೆ ವಿದ್ಯಾರ್ಥಿಗೆ ಹೇಳಿದರು ಇಂತಹ ಕಹಿ ಘಟನೆಗಳು ವಿಪ್ರ ಸಮುದಾಯಕ್ಕೆ ಅಪಮಾನ ಮಾಡಿರುವ ಖಂಡನೆ ವ್ಯಕ್ತಪಡಿಸಿ ಕುರಿತು ಮಾಧ್ಯಮಗೋಷ್ಟಿ ಏರ್ಪಡಿಸಿದ್ದರು.

ಇದೇ ಸಂದರ್ಭದಲ್ಲಿ ಅಧ್ಯಕ್ಷರಾದ ಎಸ್.ರಘುನಾಥ್ ರವರು ಮಾತನಾಡಿ ಬ್ರಾಹ್ಮಣ ಸಮಾಜವನ್ನು ಹೀಯಾಳಿಸುವುದು, ನಿಂದಿಸುವುದು, ಅಪಹಾಸ್ಯಕ್ಕೆ ಒಳಪಡಿಸುವುದು ಮತ್ತು ಬ್ರಾಹ್ಮಣರ ಮೇಲೆ ದೌರ್ಜನ್ಯ ವೆಸುಗುವುದು ಸಾಮಾನ್ಯವಾಗಿದೆ, ಬ್ರಾಹ್ಮಣರು ಅಲ್ಪಸಂಖ್ಯಾತರಾಗಿದ್ದಾರೆ.

ಇಂತಹ ಕಹಿ ಘಟನೆಗಳು ನಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿಗಳು, ಶಿಕ್ಷಣ ಸಚಿವರಿಗೆ ಮನವಿ ಮಾಡಲಾಗಿದೆ.

ಶಿಕ್ಷಣ ಸಚಿವರು ವಿದ್ಯಾರ್ಥಿ ಪರೀಕ್ಷೆ ಬರೆಯಲು ಅವಕಾಶ ನೀಡುತ್ತೇವೆ ಎಂದು ಹೇಳಿದ್ದಾರೆ ಮತ್ತು ಸಿ.ಇ.ಟಿ.ಪ್ರಾಧಿಕಾರ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಹೇಳಿರುವುದು ಸಮಾಧಾನಕರ ಸಂಗತಿ.

ಜನಿವಾರ ಕಿತ್ತು ಹಾಕಿರುವುದರಿಂದ ಬ್ರಾಹ್ಮಣ ಸಮುದಾಯವು ರಾಜ್ಯಾದ್ಯಂತ ಅಕ್ರೋಶ ವ್ಯಕ್ತಪಡಿಸುತ್ತಿದ್ದಾರೆ, ಎಲ್ಲ ಕಡೆಗಳಲ್ಲಿ ಪ್ರತಿಭಟನೆಯಾಗುತ್ತಿದೆ. ವಿಪ್ರ ಸಮುದಾಯದಕ್ಕೆ ಆಗಿರುವ ನೋವು, ಸಂಕಷ್ಟಗಳು ಎದುರಿಸುತ್ತಿರುವ ಸಮಸ್ಯೆಗಳು ಕುರಿತು ಮಹಾಸಭಾ ದಿಂದ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಳ್ಳಲಾಗುವುದು.

ಸಿ.ಇ.ಟಿ ಪರೀಕ್ಷೆ ಬರೆಯಲು ಅವಕಾಶ ನೀಡದಿರುವ ಬ್ರಾಹ್ಮಣ ವಿದ್ಯಾರ್ಥಿಗೆ ಶಿಕ್ಷಣಕ್ಕೆ ಬೇಕಾದ ಆರ್ಥಿಕ ಸಹಾಯ ಮಹಾಸಭಾದಿಂದ ನೀಡಲಾಗುವುದು, ನಮ್ಮ ಸಂಪ್ರಾದಯ, ಸಂಸ್ಕೃತಿ ಎತ್ತಿಹಿಡಿದಿದ್ದಾನೆ ಎಂದು ಹೇಳಿದರು.

ಆರ್.ಲಕ್ಷ್ಮಿಕಾಂತ್ ಯಾರು ಏನು ಬೇಕಾದರು ಬ್ರಾಹ್ಮಣರ ಮೇಲೆ ದಬ್ಬಾಳಿಕೆ ಮಾಡಬಹುದು ಎಂದು ತಿಳಿದಿದ್ದಾರೆ , ಜನಿವಾರ ವಿವಾದ ಇಡಿ ರಾಜ್ಯ ಸರ್ಕಾರಕ್ಕೆ ಕೆಟ್ಟ ಹೆಸರು ಬಂದಿದೆ.

ಪರೀಕ್ಷೆ ಬರೆಯಲು ಲಕ್ಷಾಂತರ ವಿದ್ಯಾರ್ಥಿಗಳು ಬರುತ್ತಾರೆ, ಅದರಲ್ಲಿ ಬ್ರಾಹ್ಮಣ ವಿದ್ಯಾರ್ಥಿಗೆ ಈ ಪರೀಕ್ಷೆ ಮಾಡಬೇಕು ಎಂದರೆ ಪೂರ್ವನಿಯೋಜಿತ ಸಂಚು ಎಂದು ಕಾಣುತ್ತದೆ.

Tags

Post a Comment

0Comments

Post a Comment (0)