ಶ್ರೀ ದುರ್ಗಾಪರಮೇಶ್ವರಿ ದೇಗುಲ ರಥೋತ್ಸವದ ವೇಳೆ ತೇರು ಮುರಿದು ಅವಘಡ

VK NEWS
0




ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ಸಮೀಪದ ಪ್ರಸಿದ್ಧ ಕ್ಷೇತ್ರ ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇಗುಲ  ರಥೋತ್ಸವ ವೇಳೆ ತೇರು ಮುರಿದು ಅವಘಡ ಸಂಭವಿಸಿದೆ. ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ವಾರ್ಷಿಕ ಉತ್ಸವದ ಅಂಗವಾಗಿ ನಡೆಯುತ್ತಿದ್ದ ರಥೋತ್ಸವದ ವೇಳೆ ತೇರಿನ ಮೇಲ್ಭಾಗ ಏಕಾಏಕಿ ಕುಸಿದಿದೆ. ತೇರಿನ ಮೇಲ್ಬಾಗ ಕುಸಿಯುವ ವೇಳೆ ಅರ್ಚಕರು ತೇರಿನಲ್ಲೇ ಇದ್ದರೂ ಅದೃಷ್ಟವಶಾತ್ ಪಾರಾಗಿದ್ದಾರೆ. ಯಾವುದೇ ಗಂಭೀರ ಅನಾಹುತಗಳಾಗಿಲ್ಲ.  ರಾತ್ರಿ 1:45ರ ಸುಮಾರಿಗೆ ಘಟನೆ ಸಂಭವಿಸಿದ್ದು, ಇದರಿಂದ ಭಕ್ತ ಸಮೂಹದಲ್ಲೂ ಆತಂಕ ಸೃಷ್ಟಿಯಾಗಿದೆ. ಬಳಿಕ ಚಂದ್ರಮಂಡಲ ತೇರಿನಲ್ಲಿ ದೇವರ ಉತ್ಸವ ಮುಂದುವರಿಯಿತು.



Post a Comment

0Comments

Post a Comment (0)