ನವದೆಹಲಿ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಪಾಲ್ಗಾಮ್‌ನಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ ೨೮ ಜನರು ಸಾವನ್ನಪ್ಪಿದೆ ಬೆನ್ನಲ್ಲೇ ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರ ತೀರಿಸಿಕೊಳ್ಳಲು ಮುಂದಾಗುತ್ತಿದೆ,
ಭಾರತ ಪಾಕಿಸ್ತಾನದ ವಿರುದ್ಧ ಪ್ರತೀಕಾರದ ಭಾಗವಾಗಿ ಸಿಂಧೂ ನದಿ ನೀರು ಒಪ್ಪಂದವನ್ನು ಸ್ಧಗಿತಗೊಳಿಸಿದೆ, ಅಟ್ಟಾರಿ ಚೆಕ್ ಪೋಸ್ಟ್ ಅನ್ನು ಮುಚ್ಚುವುದು ಸೇರಿದಂತೆ ಹಲವು ಕಠಿಣ ಕ್ರಮಗಳೊಂದಿಗೆ ಪ್ರತಿಕ್ರಿಯಿಸಿದೆ, ಇದರ ಬೆನ್ನಲ್ಲೇ ಪಾಕಿಸ್ತಾನ ಏಪ್ರಿಲ್ ೨೪-೨೫ ರಂದು ತನ್ನ ಕರಾಚಿ ಕರಾವಳಿಯಲ್ಲಿ ಕ್ಷಿಪಣಿ ಪರೀಕ್ಷೆಯನ್ನು ನಡೆಸಲು ಸಜ್ಜಾಗುತ್ತಿದೆ ಇದನ್ನು ಭಾರತೀಯ ಸಂಸ್ಧೆಗಳು ಗಡಿಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ,