ಹುಬ್ಬಳ್ಳಿ: ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿ ಎಂದು ಕೇಂದ್ರ ಸರ್ಕಾರ ಮಂಗಳವಾರ ಹೇಳಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರು, ವಕ್ಫ್ ತಿದ್ದುಪಡಿ ಕಾಯ್ದೆ ಜಾರಿ ತಂದಿರುವುದು ಮುಸ್ಲಿಂರ ವಿರುದ್ಧವಾಗಿ ಅಲ್ಲ. ವಕ್ಫ್ ಆಸ್ತಿ ಸಂರಕ್ಷಣೆಗಾಗಿಯೇ ಎಂಬುದನ್ನು ಈಗಾಗಲೇ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟಪಡಿಸಿದ್ದಾರೆ. ಮುಸ್ಲಿಂ ಸಮುದಾಯದಲ್ಲಿ ಸಾಮಾಜಿಕ ನ್ಯಾಯ ಕಲ್ಪಿಸಲೆಂದೇ ಜಾರಿಗೆ ತರಲಾಗಿದೆ ಎಂದು ಹೇಳಿದರು
ಮತ ಬ್ಯಾಂಕ್ ರಾಜಕೀಯಕ್ಕಾಗಿ ವಕ್ಫ್ ತಿದ್ದುಪಡಿ ಕಾಯ್ದೆಯ ವಿಷಯದಲ್ಲಿ ಕಾಂಗ್ರೆಸ್ ಜನರನ್ನು ದಾರಿ ತಪ್ಪಿಸಲು ಯತ್ನಿಸುತ್ತಿದೆ. ಆದರೆ, ಜನರು ಮೂರ್ಖರಲ್ಲ, ಅವರಿಗೆ ಎಲ್ಲವೂ ತಿಳಿದಿದೆ. ಮಾಹಿತಿಯಿದೆ ಎಂದು ತಿಳಿಸಿದರು.
ಕರ್ನಾಟಕದಲ್ಲಿ ವಕ್ಫ್ ತಿದ್ದುಪಡಿ ಮಸೂದೆಯನ್ನು ಜಾರಿಗೆ ತರದಿರುವ ಬಗ್ಗೆ ಸಚಿವ ಜಮೀರ್ ಅಹ್ಮದ್ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ, ಮಸೂದೆಯನ್ನು ಜಮೀರ್ ಅಹ್ಮದ್ ಆಗಿರಲಿ, ಸಿದ್ದರಾಮಯ್ಯ ಆಗಿರಲಿ ಅಥವಾ ರಾಹುಲ್ ಗಾಂಧಿ ಆಗಿರಲಿ ಯಾರೇ ವಿರೋಧಿಸಿದರು ಕಾನೂನನ್ನು ಜಾರಿಗೆ ತರುವುದು ಅಗತ್ಯವಾಗಿದೆ ಎಂದರು.
ಈಗಾಗಲೇ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಸ್ಪಷ್ಟವಾಗಿ ಹೇಳಿದ್ದಾರೆ. ಮುಸ್ಲಿಂ ಸಮುದಾಯದೊಳಗೆ ಸಾಮಾಜಿಕ ನ್ಯಾಯವನ್ನು ಖಚಿತಪಡಿಸುವುದು ಇದರ ಉದ್ದೇಶವಾಗಿದೆ ಎಂದು ಹೇಳಿದರು.
ಕಾನೂನು ವಕ್ಫ್ ಆಡಳಿತಕ್ಕೆ ಪಾರದರ್ಶಕತೆಯನ್ನು ತರುತ್ತದೆ, ವಕ್ಫ್ ಆದಾಯವನ್ನು ಹೆಚ್ಚಿಸುತ್ತದೆ ಮತ್ತು ಮುಸ್ಲಿಂ ಸಮುದಾಯದ ಬಡವರಿಗೆ ಸೇವೆ ಸಲ್ಲಿಸುತ್ತದೆ. "'ಉಮ್ಮೀದ್' ನ ಗುರಿ ಮುಸ್ಲಿಂ ಮಹಿಳೆಯರನ್ನು ಸಬಲೀಕರಣಗೊಳಿಸುವುದು ಮತ್ತು ಸಮುದಾಯಕ್ಕೆ ಉತ್ತಮ ಸೇವೆ ಸಲ್ಲಿಸುವುದಾಗಿದೆ ಎಂದು ಹೇಳಿದರು.