ಬೆಂಗಳೂರು ನಗರದಲ್ಲಿ ಸಿಸಿಬಿ (ಅಪರಾಧ ಶಾಖಾ ವಿಭಾಗ) ಪೊಲೀಸರು ಡ್ರಗ್ಸ್ ಮಾಫಿಯಾ ವಿರುದ್ಧ ಭರ್ಜರಿ ಕಾರ್ಯಾಚರಣೆ ನಡೆಸಿದ್ದಾರೆ. ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಬ್ಬರನ್ನು ಬಂಧಿಸಿರುವ ಪೊಲೀಸರು, ಒಟ್ಟಾರೆ ₹5 ಕೋಟಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ಪ್ರಕರಣದಲ್ಲಿ, ಅಧಿಕಾರಿಗಳು ₹3.5 ಕೋಟಿ ಮೌಲ್ಯದ ಹೈಡ್ರೋ ಗಾಂಜಾ DRUGS ಜಪ್ತಿ ಮಾಡಿದ್ದಾರೆ. ಇದಕ್ಕೆ ಜೊತೆಗೆ ಆರೋಪಿಬಳಿ ಸಿಕ್ಕ ₹30 ಲಕ್ಷ ನಗದನ್ನು ವಶಪಡಿಸಿಕೊಳ್ಳಲಾಗಿದೆ.
ಎರಡನೇ ಪ್ರಕರಣದಲ್ಲಿ, ಸಿಸಿಬಿ ಪೊಲೀಸರು ಸುಮಾರು 1 ಕೆಜಿ ಎಂಡಿಎಂಎ (MDMA) ಡ್ರಗ್ ಅನ್ನು ವಶಪಡಿಸಿಕೊಂಡಿದ್ದು, ಇದರ ಮೌಲ್ಯ ₹1.5 ಕೋಟಿ ಎಂದು ಅಂದಾಜಿಸಲಾಗಿದೆ. ಇದನ್ನು ಈ ಹಿಂದೆ ಈಗಲ್ ಟನ್ ರೆಸಾರ್ಟ್‌ನಲ್ಲಿ ಬಂಧನೆಯಾದ ಡ್ರಗ್ ಪೆಡ್ಲರ್‌ನಿಂದಲೇ ಮತ್ತೆ ಸಿಗಿಸಿಕೊಂಡಿದ್ದಾರೆ ಎನ್ನಲಾಗಿದೆ. ಬೆಂಗಳೂರು ನಗರದ ವಿವಿಧ ಕಾಲೇಜುಗಳಲ್ಲಿ ಆರೋಪಿತರು ವಿದ್ಯಾರ್ಥಿಗಳಿಗೆ ಡ್ರಗ್ಸ್ ಸಾಗಾಟ ನಡೆಸುತ್ತಿದ್ದರೆಂದು ವರದಿಗಳು ತಿಳಿಸಿವೆ.