ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯು Antimicrobial Resistance : Strategies for Prevention and Alternatives ವಿಷಯ ಕುರಿತು 2025ನೇ ಮೇ 14 ರಿಂದ 16 ರ ವರೆಗೆ ಮೂರು ದಿನಗಳ ರಾಷ್ಟ್ರೀಯ ಸಮ್ಮೇಳನವನ್ನು ಅಕಾಡೆಮಿಯ ಕಚೇರಿಯಲ್ಲಿ ಹಮ್ಮಿಕೊಂಡಿದೆ.
ಈ ಸಮ್ಮೇಳನದಲ್ಲಿ ವಿವಿಧ ಪ್ರತಿಷ್ಠಿತ ಸಂಸ್ಥೆಗಳ ಹೆಸರಾಂತ ವಿಜ್ಞಾನಿಗಳು ತಾಂತ್ರಿಕ ಉಪನ್ಯಾಸಗಳನ್ನು ನೀಡಲಿದ್ದಾರೆ. ಈ ಸಮ್ಮೇಳನದಲ್ಲಿ ಯುವ ವಿಜ್ಞಾನಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು Research Paper presentation ಮಂಡಿಸಲು ಅವಕಾಶ ಕಲ್ಪಿಸಲಾಗಿದ್ದು, ಆಯ್ಕೆಯಾದ Research Paper ಗಳಿಗೆ ನಗದು ಬಹುಮಾನವನ್ನು ಸಹ ನೀಡಲಾಗುವುದು. ಸಮ್ಮೇಳನದಲ್ಲಿ ಸ್ನಾತಕೋತ್ತರ ವಿಜ್ಞಾನ ವಿದ್ಯಾರ್ಥಿಗಳು, ಸಮಶೊಧನಾ ವಿದ್ಯಾರ್ಥಿಗಳು, ಪ್ರಾಧ್ಯಾಪಕರು, ಯುವ ವಿಜ್ಞಾನಿಗಳು, ಶಯಕ್ಷಣಿಕ ತಜ್ಞಾರು, ಯುವ ಉದ್ಯಮದಾರರು ಭಾಗವಹಿಸಬಹುದಾಗಿದೆ.
ಆಸಕ್ತ ಪ್ರತಿನಿಧಿಗಳು 2025ನೇ ಮೇ 06ರ ಒಳಗಾಗಿ ಗೂಗಲ್ ಫಾರಂ http://forms.gle/ nphLXewAESvuPP5YB ಮೂಲಕ ನೋಂದಾಯಿಸಿಕೊಳ್ಳಬಹುದು.
ಹೆಚ್ಚಿನ ಮಹಿತಿಗಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿ ಅಧಿಕಾರಿಗಳ ಮೊಬೈಲ್ ದೂರವಾಣಿ ಸಂ. 9845258894, 9743084194 ಅಥವಾ 9686449019 ಅಥವಾ ವೆಬ್ ಸೈಟ್ http://kstacademy.in ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡೆಮಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ.ಎಂ. ರಮೇಶ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.